Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ; ಆಡಳಿತದಲ್ಲಿ ನಾನು ಮೊದಲು ಸ್ಟ್ರಾಂಗ್ ಆಗಿದ್ದೆ ಅಂತ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ: ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನ; ಆಡಳಿತದಲ್ಲಿ ನಾನು ಮೊದಲು ಸ್ಟ್ರಾಂಗ್ ಆಗಿದ್ದೆ ಅಂತ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 06, 2023 | 2:40 PM

ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ನಾಳೆ ಹೈದರಾಬಾದ್​ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು ಆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ಶನಿವಾರದಿಂದ ತೆಲಂಗಾಣದಲ್ಲೇ ಇದ್ದಾರೆ.

ಬೆಳಗಾವಿ: ಬೆಂಗಳೂರಲ್ಲಿ ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿಧಾನ ಸಭಾ ಆದಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತೆಲಂಗಾಣದಲ್ಲಿ ರೇವಂತ್ ರೆಡ್ಡಿ (Revanth Reddy) ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದರು. ನಿನ್ನೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ಸಿದ್ದರಾಮಯ್ಯ ಮೊದಲಿನ ಅವಧಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗಿಲ್ಲ, ಮಂಕಾಗಿದ್ದಾರೆ, ಮೆತ್ತಗಾಗಿದ್ದಾರೆ ಅಂತ ಹೇಳಿದ್ದನ್ನು ಅವರಿಗೆ ನೆನಪಿಸಿದಾಗ, ಅವರ ಮಾತು ಬಿಡಿ ರಾಜಕಾರಣ ಮಾಡುತ್ತಾರೆ, ತಾನು ಮಂಕಾಗಿದ್ದೇನೆಯೇ ಮಾಧ್ಯಮದವರು ಹೇಳಲಿ ಅಂತ ಹೇಳಿದರು. ಅಲ್ಲಾ ಸಾರ್ ಮೊದಲಿನ ಹಾಗೆ ಸ್ಟ್ರಾಂಗ್ ಅಂತ ಮಾಧ್ಯಮದವರು ಹೇಳುತ್ತಿದ್ದಂತೆಯೇ, ಅಂದರೆ ಮೊದಲು ತಾನು ಸ್ಟ್ರಾಂಗ್ ಆಗಿದ್ದಿದನ್ನು ಅವರು ಒಪ್ಪಿಕೊಂಡಿದ್ದಾರೆ ಅಂತಾಯ್ತು ಎಂದು ನಗುತ್ತಾ ಹೇಳಿ ಸಿದ್ದರಾಮಯ್ಯ ಅಲ್ಲಿಂದ ನಡೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ