ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿ ನಾಯಕರಿಗಿದೆಯಾ? ಸಿದ್ದರಾಮಯ್ಯ

ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿ ನಾಯಕರಿಗಿದೆಯಾ? ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 03, 2024 | 4:12 PM

ಬಿಜೆಪಿ ನಾಯಕರು ಯಾವ ನೈತಿಕತೆಯ ಆಧಾರದಲ್ಲಿ ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ, ಅವರು ಅಧಿಕಾರದ್ಲಲಿದ್ದಾಗ ಒಂದು ಪ್ರಕರಣವನ್ನಾದರೂ ಸಿಬಿಐಗೆ ನೀಡಿದ್ರಾ ಅಂತ ಸಿದ್ದರಾಮಯ್ಯ ನೀಡುವ ಸಮರ್ಥನೆ ಮತ್ತು ಅದರ ಹಿಂದಿನ ತರ್ಕ ಕನ್ನಡಗರಿಗೆ ಅರ್ಥವಾಗುತ್ತಿಲ್ಲ. ಅವರು ಸಿಬಿಐ ತನಿಖೆ ಕೊಡಲಿಲ್ಲಾಂತ ನೀವೂ ಕೊಡಲ್ವಾ? ಇದ್ಯಾವ ಸೀಮೆ ನ್ಯಾಯ ಸ್ವಾಮಿ?

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಅರೋಪದ ತನಿಖೆಯನ್ನು ಸಿಬಿಐಗೆ ವಹಿಸಿಕೊಡುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಕಂಠೀರವ ಕ್ರೀಡಾಂಗಣ ಬಳಿ ತಮ್ಮನ್ನು ಸುತ್ತುವರಿದು ಸಿಬಿಐ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಪ್ರಕರಣ ಸಿಬಿಐ ತನಿಖೆಗೆ ನೀಡುವಂತೆ ಹೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ಎಂದು ಹೇಳಿದ ಅವರು ಪ್ರಕರಣ ತನಿಖೆ ನಡೆಸಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರಿಗೆ ಸೂಚಿಸಲಾಗಿದೆ ಎಂದರು. ಬಿಜೆಪಿ ನಾಯಕರು ಹೇಳುತ್ತಾರೆ ಅಂತ ನೀವು ಸಹ ಸಿಬಿಐ ಅಂತ ಹೇಳ್ಬೇಡಿ, ಕೊಡುವ ಅವಶ್ಯಕತೆ ಇದೆಯಾ ಅಂತ ಯೋಚಿಸಿ, ನಮ್ಮ ಜಮೀನು ಸ್ವಾಧೀನ ಪಡಿಸಿಕೊಂಡಿದ್ದಾರೆ, ಸ್ವಾಧೀನಪಡಿಸಿಕೊಂಡ ಜಮೀನಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆಯಾಗಬೇಕೆಂದು ಯಾವ ಸರ್ಕಾರ ನಿಯಮ ರೂಪಿಸಿತ್ತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಈಗಾಗಲೇ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ತನಿಖೆಗೆ ಆದೇಶದ ನೀಡಲಾಗಿದೆ, ವಿವಾದಕ್ಕೀಡಾಗಿರುವ ಸೈಟುಗಳನ್ನು ಅಮಾನತ್ತಿಲ್ಲಿಡಲಾಗಿದೆ ಮತ್ತು ಸೈಟು ಹಂಚಿಕೆಯಾದಾಗ ಮುಡಾದಲ್ಲಿದ್ದ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಪಾಟೀಲ್ ಯತ್ನಾಳ್