ಬಿಜೆಪಿ ಕಾರ್ಯಕರ್ತರು ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ, ಯಾವುದೇ ಗೊಂದಲವಿಲ್ಲ: ಪ್ರಜ್ವಲ್ ರೇವಣ್ಣ
ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಕೇಂದ್ರಗಳಲ್ಲಿ ಎರಡೂ ಪಕ್ಷಗಳ ನಾಯಕನ್ನು ಮಾತಾಡಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಹಾಗೆಯೇ, ಪಕ್ಷದ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ತಾಲ್ಲೂಕುಮಟ್ಟದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪ್ರಜ್ವಲ್ ಹೇಳಿದರು.
ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೇಳೋದನ್ನು ಕೇಳಿದರೆ, ಈ ಬಾರಿಯ ಲೊಕಸಭಾ ಚುನಾವಣೆಯಲ್ಲಿ (Lok Sabha) ಹಾಸನ ಕ್ಷೇತ್ರಕ್ಕೆ ಅವರೇ ಬಿಜೆಪಿ-ಜೆಡಿಎಸ್ ಮೈತ್ರಿ ಅಥವಾ ಎನ್ ಡಿಎ (NDA) ಅಭ್ಯರ್ಥಿಯಾಗಲಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಪ್ರಜ್ವಲ್, ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನಡುವೆ ಯಾವುದೇ ಗೊಂದಲವಿಲ್ಲ, ಅಸಲಿಗೆ ಬಿಜೆಪಿ ಧುರೀಣರು ತನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಕ್ಷೇತ್ರದ ಯಾವ್ಯಾವ ಅಂಶಗಳನ್ನು ಕೈಗೆತ್ತಿಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಅವರೊಂದಿಗೆ ಎಲ್ಲ ಜೆಡಿಎಸ್ ನಾಯಕರ ಆಸೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನೋಡುವುದಾಗಿದೆ ಎಂದು ಹೇಳಿದರು. ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಕೇಂದ್ರಗಳಲ್ಲಿ ಎರಡೂ ಪಕ್ಷಗಳ ನಾಯಕನ್ನು ಮಾತಾಡಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಹಾಗೆಯೇ, ಪಕ್ಷದ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ತಾಲ್ಲೂಕುಮಟ್ಟದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪ್ರಜ್ವಲ್ ಹೇಳಿದರು. ಸಂಸತ್ತಿನ ಅಧಿವೇಶನದ ಬಳಿಕ ಸೀಟು ಹೊಂದಾಣಿಕೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಸಂಸದ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ