ಪ್ರಚೋದನಕಾರಿ ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ನೆಲೆಗೊಂಡಿರುವಂತೆ ಮಾಡುವುದಷ್ಟೇ ಬಿಜೆಪಿ ನಾಯಕರ ಕೆಲಸ: ದಿನೇಶ್ ಗುಂಡೂರಾವ್

ಅರುಣ್​ ಕುಮಾರ್​ ಬೆಳ್ಳಿ

Updated on: May 05, 2025 | 3:13 PM

ಕರಾವಳಿ ಭಾಗದಲ್ಲಿ ಏನಾದರೊಂದು ಘಟನೆ ನಡೆದರೆ ಪೂಂಜಾ ಪ್ರತಿಸಲ ಪ್ರಚೋದನಾತ್ಮಕ ಹೇಳಿಕೆ ನೀಡುವ ಮೂಲಕ ಒಬ್ಬ ಸೀರಿಯಲ್ ಅಫೆಂಡರ್ ಥರ ಕಾಣಿಸುತ್ತಿದ್ದಾರೆ, ಪೊಲೀಸ್ ಸ್ಟೇಷನ್ ಗೆ ಹೋಗುವುದು ಅವರಿಗೆ ಅಭ್ಯಾಸವಾದಂತಿದೆ, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಂಡು ಪ್ರಚೋದಕಾರಿ ಹೇಳಿಕೆ ನೀಡುತ್ತಾರೆ, ಮಂಗಳೂರು ಜನ ಇವರ ಕುಯುಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ದಿನೇಶ್ ಹೇಳಿದರು.

ಬೆಂಗಳೂರು ಮೇ 5: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕರಾವಳಿ ಪ್ರಾಂತ್ಯದಲ್ಲಿ ಶಾಂತಿ ನೆಲಸುವುದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ನಾರಾಯಣಸ್ವಾಮಿ ಚಲವಾದಿ (Narayana Swamy Chalavadi) ಮತ್ತು ಶಾಸಕ ಹರೀಶ್ ಪೂಂಜಾರಂಥವರಿಗೆ ಬೇಕಿಲ್ಲ, ವಿಷಯ ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಶಕ್ತಿಯೇ ಅವರಿಗಲ್ಲ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಅರೋಪಿಗಳನ್ನು ಪೊಲೀಸರು ಕೇವಲ ಒಂದು ದಿನದ ಅವಧಿಯಲ್ಲಿ ಬಂಧಿಸಿದ್ದಾರೆ ಎಂದು ಹೇಳಿದರು. ಕೇಂದ್ರ ಸಚಿವ ಸೋಮಣ್ಣ ಸರ್ಕಾರ ನಿಷ್ಕ್ರಿಯಗೊಂಡಿದೆ, ಪ್ರಕರಣವನ್ನು ಎನ್​ಐಎ ತನಿಖೆಗೆ ಒಪ್ಪಿಸಬೇಕು ಅನ್ನುತ್ತಾರೆ, ಇವರೆಲ್ಲರ ಉದ್ದೇಶ ರಾಜ್ಯದಲ್ಲಿ ಅಶಾಂತಿ ನೆಲೆಗೊಂಡಿರಬೇಕು ಮತ್ತು ಸರ್ಕಾರವನ್ನು ದೂಷಿಸುತ್ತಿರಬೇಕು ಎಂದು ದಿನೇಶ್ ಹೇಳಿದರು.

ಇದನ್ನೂ ಓದಿ:  ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 05, 2025 02:26 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.