ನಾನು ಮಂಡಿಸಿದ 2024-25 ಸಾಲಿನ ಬಜೆಟ್ ಓದದೆ ಬಿಜೆಪಿ ನಾಯಕರು ಅಭಿವೃದ್ಧಿ ಶೂನ್ಯ ಅನ್ನುತ್ತಾರೆ: ಸಿದ್ದರಾಮಯ್ಯ

|

Updated on: May 21, 2024 | 3:53 PM

ಅವರು ತಾನು ಮಂಡಿಸಿರುವ ಬಜೆಟ್ ಓದದೆ ಅಭಿವೃದ್ಧಿ ಶೂನ್ಯ ಅಂತ ಹೇಳುತ್ತಾರೆ ಎಂದು ಬಿಜೆಪಿ ನಾಯಕನ್ನು ಅಣಕಿಸಿದರು. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿ ಕೆಲಸಗಳಿಗೆ ತೆಗೆದಿರಿಸಲಾಗಿದೆ ಮತ್ತು ನೀರಾವರಿ ಯೋಜನೆಗಳಿಗಾಗಿ ₹ 16,000 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು (development works) ನಡೆಯುತ್ತಿಲ್ಲ ಎಂದು ಹೇಳಿರುವ ರಾಜ್ಯ ಬಿಜೆಪಿ ನಾಯಕರನ್ನು (BJP leaders) ತರಾಟೆಗೆ ತೆಗೆದುಕೊಂಡರು. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡವರನ್ನು ಸಶಕ್ತಗೊಳಿಸುವ ಕೆಲಸವನ್ನು ಮಾಡಲಾಗಿದೆ, ಇದು ಅಭಿವೃದ್ಧಿ ಕೆಲಸ ಅನಿಸಿಕೊಳ್ಳಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಮಾತ್ರ ಸಿಕ್ಕರೆ ಸಾಲದು, ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಡಾ ಬಿಅರ್ ಅಂಬೇಡ್ಕರ್ ಹೇಳಿರುವುದನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು. ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ ಅಂತ ಪತ್ರಕರ್ತರೊಬ್ಬರು ಹೇಳಿದ್ದಕ್ಕೆ ಸಿದ್ದರಾಮಯ್ಯ, ಅವರು ತಾನು ಮಂಡಿಸಿರುವ ಬಜೆಟ್ ಓದದೆ ಅಭಿವೃದ್ಧಿ ಶೂನ್ಯ ಅಂತ ಹೇಳುತ್ತಾರೆ ಎಂದು ಬಿಜೆಪಿ ನಾಯಕನ್ನು ಅಣಕಿಸಿದರು. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿ ಕೆಲಸಗಳಿಗೆ ತೆಗೆದಿರಿಸಲಾಗಿದೆ ಮತ್ತು ನೀರಾವರಿ ಯೋಜನೆಗಳಿಗಾಗಿ ₹ 16,000 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಭಿವೃದ್ಧಿ ಶೂನ್ಯ ಒಂದು ವರ್ಷವನ್ನು ಸಿದ್ದರಾಮಯ್ಯ ಸರ್ಕಾರ ಪೂರೈಸಿದೆ: ಆರ್ ಅಶೋಕ, ವಿರೋಧ ಪಕ್ಷದ ನಾಯಕ