ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆ ಶಿವಕುಮಾರ್

ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆ ಶಿವಕುಮಾರ್

TV9 Web
| Updated By: Ganapathi Sharma

Updated on:Jan 23, 2025 | 2:41 PM

ಶ್ರೀರಾಮುಲು ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್​​ಗೆ ಸೆಳೆಯುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದೆಲ್ಲ ಸತೀಶ್ ಜಾರಕಿಹೊಳಿಯನ್ನು ಹಣಿಯಲು ಡಿಕೆಶಿ ತಂತ್ರ ಎಂದು ಅವರು ಹೇಳಿದ್ದಾರೆ. ಆದರೆ, ಇದನ್ನು ಡಿಕೆಶಿ ಅಲ್ಲಗಳೆದಿದ್ದಾರೆ. ಡಿಕೆ ಶಿವಕುಮಾರ್ ಹೇಳಿದ್ದೇನೆಂಬುದು ಇಲ್ಲಿದೆ.

ಬೆಂಗಳೂರು, ಜನವರಿ 23: ಸಚಿವ ಸತೀಶ್ ಜಾರಕಿಹೊಳಿಯನ್ನು ಹಳಿಯುವುದಕ್ಕೆಂದು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿಯಿಂದ ಶ್ರೀರಾಮುಲುರನ್ನು ಸೆಳೆಯುತ್ತಿದ್ದಾರೆ ಎಂದು ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಆರೋಪಿಸಿದ್ದು, ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಇದೀಗ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನನ್ನು ಯಾರೂ ಭೇಟಿ ಮಾಡಿಲ್ಲ. ಅವರ ಪಕ್ಷದ ಆಂತರಿಕ ಸಂಘರ್ಷವೇ ಹೊರತು ನನಗೂ ಅದಕ್ಕೂ ಯಾವ ಸಂಬಂಧವೂ ಇಲ್ಲ. ಅವರೇ ಬಹುಶಃ ಪಕ್ಷಕ್ಕೆ ಕಳುಹಿಸಬೇಕು ಎಂದು ಪ್ರಯತ್ನಿಸುತ್ತಿರಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 23, 2025 02:39 PM