ನಮ್ಮ ಅಧ್ಯಕ್ಷರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಬಗ್ಗೆ ಹೇಳಿದ್ದನ್ನು ಬಿಜೆಪಿ ನಾಯಕರು ತಿರುಚಿ ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಮಂಗಳೂರಿನಲ್ಲಿ ಮಾತಾಡಿದ ಸಿದ್ದರಾಮಯ್ಯನವರು ಶಿವಕುಮಾರ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದಷ್ಟೇ ಹೇಳಿದ್ದಾರೆ ಎಂದರು.
ಮಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರ ನಡುಬವೆ ಭಿನ್ನಾಭಿಪ್ರಾಯಗಳಿರಬಹುದು, ಅದರೆ ತಮ್ಮ ಧುರೀಣರ ವಿರುದ್ಧ ಬೇರೆ ಪಕ್ಷದ ನಾಯಕರು ಹಗುರವಾಗಿ ಮಾತಾಡಿದರೆ ಅವರು ಅದನ್ನು ಉಗ್ರವಾಗಿ ಖಂಡಿಸುತ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರು ಮಂಗಳೂರು ಕುಕ್ಕರ್ ಬ್ಲಾಸ್ಟ್ (cooker blast) ಬಗ್ಗೆ ಮಾತಾಡಿದ್ದನ್ನು ಅವರು ಉಗ್ರರನ್ನು ವಹಿಸಿಕೊಂಡು ಮಾತಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ (Siddaramaiah) ಅವರು ತಮ್ಮ ಪಕ್ಷದ ಅಧ್ಯಕ್ಷರ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತಾಡಿದ ಸಿದ್ದರಾಮಯ್ಯನವರು ಶಿವಕುಮಾರ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದಷ್ಟೇ ಅವರು ಹೇಳಿದ್ದಾರೆ, ಉಗ್ರರಿಗೆ ಬೆಂಬಲ ನೀಡುತ್ತಿದ್ದೇವೆ ಅಂತಲ್ಲ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ