ಕುಮಾರ ಬಂಗಾರಪ್ಪ ಮನೆಯಲ್ಲಿ ಯತ್ನಾಳ್ ಬಣವೆಂದು ಗುರುತಿಸಿಕೊಂಡಿದ್ದ ಬಿಜೆಪಿ ನಾಯಕರ ಮೀಟಿಂಗ್

Updated on: May 22, 2025 | 2:57 PM

ಬಸನಗೌಡ ಪಾಟೀಲ್ ಯತ್ನಾಳ್ ಅವರಂತೂ ಸಭೆಯಲ್ಲಿ ಭಾಗವಹಿಸುವಂತಿಲ್ಲ, ಆ ಪ್ರಶ್ನೆ ಬೇರೆ. ಅದರೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆಯೇ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಟೀಕಿಸಿದ ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ಗೈರು ಹಾಜರಿ ಎದ್ದು ಕಾಣುತಿತ್ತು.

ಬೆಂಗಳೂರು, ಮೇ 22: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ನಂತರ ಬಿಜೆಪಿ ಭಿನ್ನಮತೀಯ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸುವುದು ಬಂದ್ ಆಗಿದೆ ಅಂತ ಭಾವಿಸಿದ್ದರೆ ನಿಮ್ಮ ಊಹೆ ತಪ್ಪು. ಯಾಕೆ ಅಂತ ಈ ವಿಡಿಯೋ ನೋಡಿದರೆ ಗೊತ್ತಾಗುತ್ತದೆ. ನಗರದ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಇಂದು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ನಾಯಕರು ಸಭೆ ನಡೆಸಿದರು. ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಬಿಪಿ ಹರೀಶ್, ರಮೇಶ್ ಜಾರಕಿಹೊಳಿ, ಎನ್ ಆರ್ ಸಂತೋಷ್ ಮೊದಲಾದವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ನೋಟಿಸ್​ಗೆ ಉತ್ತರ ನೀಡದ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ತಾರಾ ವರಿಷ್ಠರು? ಬಿಜೆಪಿ ಹೈಕಮಾಂಡ್ ಮುಂದಿನ ನಡೆಯೇನು?

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ