ಮಂಗಳೂರು: ಐವಾನ್ ಡಿಸೋಜಾ ವಿರುದ್ಧ ಎಫ್​ಐಅರ್ ದಾಖಲಾಗದ್ದನ್ನು ಖಂಡಿಸಿ ಬಿಜೆಪಿ ನಾಯಕರ ಧರಣಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2024 | 7:23 PM

ಧರಣಿ ನಡೆಸುತ್ತಿದ್ದಾಗ ಮತ್ತು ಪೊಲೀಸರು ವಶಕ್ಕೆ ಪಡೆದ ನಂತರವೂ ಬಿಜೆಪಿ ಮುಖಂಡರು ಐವಾನ್ ಡಿಸೋಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಎರಡು ದಿನಗಳ ಹಿಂದೆ ಡಿಸೋಜಾ ಅವರ ಮನೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರು.

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರೂ ಇದುವರೆಗೆ ಅವರ ವಿರುದ್ಧ ಎಫ್ಐಅರ್ ದಾಖಲಾಗದಿರುವುದನ್ನು ಪ್ರತಿಭಟಿಸಿ ಬಿಜೆಪಿ ನಾಯಕರು ಇಂದು ನಗರದ ಪಿವಿಎಸ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರನ್ನು ಬಲವಂತದಿಂದ ವಶಕ್ಕೆ ಪಡೆದು ಬಸ್ ಹತ್ತಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಜೆಪಿ ಪ್ರತಿಭಟನೆಗಿಳಿದಾಗ ಶಿವಕುಮಾರ್ ಜೊತೆ ವಿಜಯೇಂದ್ರ ಹರಟೆಗೆ ಕೂತಿದ್ದು ನಾಚಿಕೆಗೇಡು: ಬಸನಗೌಡ ಯತ್ನಾಳ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.