ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ? ಏನಂತಾರೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿ(ಎಸ್) ನಾಯಕರು?

ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ? ಏನಂತಾರೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿ(ಎಸ್) ನಾಯಕರು?

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 09, 2022 | 12:36 PM

ಕಾಂಗ್ರೆಸ್ ಗುಜರಾತ್ ನಲ್ಲಿ ಹೀನಾಯ ಸೋಲು ಅನುಭವಿಸಿದರೂ ಹಿಮಾಚಲ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿಯನ್ನು ಮಣಿಸಿ ನೈತಿಕ ಬಲ ಹೆಚ್ಚಿಸಿಕೊಂಡಿದೆ.

ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನ ಸಭೆಗೆ (assembly) ನಡೆದ ಚುನಾವಣೆಗಳ ಫಲಿತಾಂಶ ಬಂದಿದೆ. ಬಿಜೆಪಿ (BJP) ಗುಜರಾತ್ ನಲ್ಲಿ ಕಾಂಗ್ರೆಸ್ (Congress) ಪಕ್ಷವನ್ನು ಧೂಳೀಪಟ ಮಡಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ ಹಿಮಾಚಲ ಪ್ರದೇಶವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಗುಜರಾತ್ ನಲ್ಲಿ ಹೀನಾಯ ಸೋಲು ಅನುಭವಿಸಿದರೂ ಹಿಮಾಚಲ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿಯನ್ನು ಮಣಿಸಿ ನೈತಿಕ ಬಲ ಹೆಚ್ಚಿಸಿಕೊಂಡಿದೆ. ಗುಜರಾತ್ ರಾಜ್ಯದ ಫಲಿತಾಂಶ ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿದರೆ, ಅಂಥದ್ದೇನೂ ಅಗದು ಅಂತ ಕಾಂಗ್ರೆಸ್ ಮತ್ತು ಜೆಡಿ(ಎಸ್) ನಾಯಕರು ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ