ಸಿಎಂ ರಾಜೀನಾಮೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ರಾಜಿನಾಮೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಮೈಸೂರು, ನವೆಂಬರ್ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿ (Mysore) ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪ್ರತಿಭಟನಾಕಾರರ ವಾಹನವನ್ನು ಕೂಡ ಸೀಜ್ ಮಾಡಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಶಾಸಕ ಶ್ರೀವತ್ಸ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos