ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ: ಶೋಭಾ ಕರಂದ್ಲಾಜೆ ಸೇರಿ ಹಲವರು ವಶಕ್ಕೆ

Edited By:

Updated on: Nov 02, 2026 | 4:03 PM

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಎಂಎಲ್ಸಿ ಭಾರತಿ ಶೆಟ್ಟಿ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ, ಹಾಲಿನ ಕ್ಯಾನ್ ಮತ್ತು ಪ್ಯಾಕೆಟ್ ಹಿಡಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನವೂ ನಡೆದಿದೆ.

ಬೆಂಗಳೂರು, ನವೆಂಬರ್​ 02: ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಗಿದೆ. ಹಾಲಿನ ಕ್ಯಾನ್ ಮತ್ತು ಪ್ಯಾಕೆಟ್ ಹಿಡಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನವೂ ನಡೆದಿದ್ದು, ಈ ವೇಳೆ ಶೋಭಾ ಕರಂದ್ಲಾಜೆ, ಮಾಜಿ ಎಂಎಲ್ಸಿ ಭಾರತಿ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More