Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಫೈರ್ ಬ್ರಾಂಡ್

ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಫೈರ್ ಬ್ರಾಂಡ್

ರಮೇಶ್ ಬಿ. ಜವಳಗೇರಾ
|

Updated on: Dec 17, 2024 | 4:30 PM

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಂದು ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿಯಾಗಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಯತ್ನಾಳ್​ ಅವರೇ ಸಚಿವ ಕಚೇರಿಗೆ ತೆರಳಿ ಕ್ಷೇತ್ರದ ಬಗ್ಗೆ ಚರ್ಚಿಸಿದ್ದಾರೆ. ಇನ್ನು ಈ ಭೇಟಿ ಹಿಂದಿನ ಉದ್ದೇಶವೇನು ಎನ್ನುವುದನ್ನು ಯತ್ನಾಳ್​ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬೆಳಗಾವಿ, (ಡಿಸೆಂಬರ್ 17): ವಕ್ಫ್​ ವಿಚಾರ ಸೇರಿದಂತೆ ಸಿದ್ಧಾಂತ ವಿಚಾರವಾಗಿ ವಿರೋಧಿಗಳನ್ನು ಟೀಕೆ ಮಾಡಿಕೊಂಡು ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ಇಂದು(ಡಿಸೆಂಬರ್ 17) ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ ಹೋಗಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದಾರೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ. ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಂದಾಣಿಕೆ ರಾಜಕೀಯ ವಿರುದ್ಧ ಯತ್ನಾಳ್ ಧ್ವನಿ ಎತ್ತುತ್ತಲೇ ಇದ್ದಾರೆ. ಹಾಗೇ ಯಾವ ಸಚಿವರ ಕಚೇರಿಗೆ ಹೋಗಿ ಯಾವುದೇ ಒಂದು ಪತ್ರ ಕೊಟ್ಟಿ ಎಂದು ಸ್ವಪಕ್ಷ ನಾಯಕರ ಹೊಂದಾಣಿಕೆ ರಾಜಕಾರಣದ ವಿರುದ್ಧ ಮಾತನಾಡಿದ್ದರು, ಇದೀಗ ಸಚಿವರನ್ನು ಭೇಟಿ ಮಾಡಿದ್ದಕ್ಕೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗುತ್ತೆ ಎಂದು ಯತ್ನಾಳ್ ಈ ಭೇಟಿ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿದ್ದಾರೆ.