BY Vijayendra: ಬಿಜೆಪಿ ಶಾಸಕ ಬಿವೈ ವಿಜಯೇಂದ್ರರ ದೆಹಲಿ ಪ್ರವಾಸ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ!
ವಿಜಯೇಂದ್ರ ಬುಧವಾರದಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು ಮತ್ತು ಇಂದು ಗೃಹ ಸಚಿವ ಆಮಿತ್ ಶಾರನ್ನು ಭೇಟಿಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನ ಜಾರಿಯಲ್ಲಿದ್ದರೂ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಸಂದೇಶವೇನಾದರೂ ಅವರು ದೆಹಲಿಗೆ ತೆಗೆದುಕೊಂಡು ಹೋಗಿದ್ದಾರೆಯೇ? ಯಾಕೆಂದರೆ, 16 ನೇ ವಿಧಾನ ಸಭೆಯ ಮೊದಲ ಅಧಿವೇಶನ ಕೊನೆಗೊಳ್ಳಲು ಬಂದರೂ ಬಿಜೆಪಿ, ವಿರೋಧ ಪಕ್ಷದ ನಾಯಕನನ್ನು (Leader of Opposition) ಆಯ್ಕೆ ಮಾಡಿಲ್ಲ. ಆಡಳಿತ ಪಕ್ಷ ಪ್ರತಿದಿನ ಗೇಲಿ ಮಾಡುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಿರಿಯ ನಾಯಕರೊಂದಿಗೆ ಚರ್ಚಿಸಲು ವಿಜಯೇಂದ್ರ ದೆಹಲಿಗೆ ಹೋಗಿರುವ ಸಾಧ್ಯತೆ ಇದೆ. ಬುಧವಾರದಂದು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು. ಮೂಲಗಳ ಪ್ರಕಾರ ಅವರು ಇಂದು ಗೃಹ ಸಚಿವ ಆಮಿತ್ ಶಾರನ್ನು ಭೇಟಿಯಾಗುವ ನಿರೀಕ್ಷೆಯಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಜಾ ಟಾಕೀಸ್ನಲ್ಲಿ ಸ್ಯಾಂಡಲ್ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ

VIDEO: ಗುಜರಾತ್ ಟೈಟಾನ್ಸ್ ತಂಡಕ್ಕೆ ಸ್ಕೂಟರ್ನಲ್ಲಿ ಸಿರಾಜ್ ಎಂಟ್ರಿ

ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ

ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
