ಟುರ್ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಸಿ.ಪಾಟೀಲ್ ಅವರು ಕುರುಬ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಅವಮಾನಕಾರಿ ಪದಗಳನ್ನು ಬಳಸಿದ್ದರು. ಇದರಿಂದ ಕುರುಬ ಸಮುದಾಯದಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿತ್ತು. ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದ ಪಾಟೀಲ್, ಸಾರ್ವಜನಿಕ ಒತ್ತಡಕ್ಕೆ ಮಣಿದು ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಗದಗ, ಏಪ್ರಿಲ್ 18: ಉಪಚುನಾವಣೆಯ ಪ್ರಚಾರದ ವೇಳೆ ಕುರುಬ ಸಮುದಾಯದ ಕುರಿತು ವಿವಾದಾತ್ಮಕ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಸಿಸಿ ಪಾಟೀಲ್, ಸಮುದಾಯದ ಆಕ್ರೋಶಕ್ಕೆ ಮಣಿದು ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಹಂಚಿಕೊಂಡಿರುವ ಅವರು, ಉಪಚುನಾವಣೆಯ ಪ್ರಚಾರ ವೇಳೆ ಹಾಲುಮತ, ಅಲ್ಪಸಂಖ್ಯಾತ ಸಮಾಜದ ಒಗ್ಗಟ್ಟು ನೋಡಿ ಕಲಿಯಿರಿ ಎಂಬ ಭರದಲ್ಲಿ ಹೇಳಿದ್ದೆ ಎಂದಿದ್ದಾರೆ. ಶಾಸಕರ ಹೇಳಿಕೆ ಕುರುಬ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಪರಿಗಣಿಸಿದ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
