ಬಿಜೆಪಿ ಶಾಸಕ ವಿರುದ್ಧದ ಲಂಚ ಕೇಸ್: ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋ ರಿಲೀಸ್

Edited By:

Updated on: Feb 25, 2026 | 2:21 PM

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಇದರ ನಡುವೆ ಇದೀಗ ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋವನ್ನು ಸಹ ಗುತ್ತಿಗೆದಾರ ಸೋನು ಲಮಾಣಿ ಬಿಡುಗಡೆ ಮಾಡಿದ್ದಾರೆ. ಆಡಿಯೋದಲ್ಲಿ ಏನಿದೆ? ಈ ಆಡಿಯೋ ಬಗ್ಗೆ ಸೋನು ಲಮಾಣಿ ಹೇಳಿದ್ದೇನು ಎನ್ನುವುದನ್ನು ಕೇಳಿ.

ಗದಗ, (ಫಬ್ರವರಿ 25): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. ಇದರ ನಡುವೆ ಇದೀಗ ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋವನ್ನು ಸಹ ಗುತ್ತಿಗೆದಾರ ಸೋನು ಲಮಾಣಿ ಬಿಡುಗಡೆ ಮಾಡಿದ್ದಾರೆ. ಆಡಿಯೋದಲ್ಲಿ ಏನಿದೆ? ಈ ಆಡಿಯೋ ಬಗ್ಗೆ ಸೋನು ಲಮಾಣಿ ಹೇಳಿದ್ದೇನು ಎನ್ನುವುದನ್ನು ಕೇಳಿ.

ಇದನ್ನೂ ನೋಡಿ: ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ

Published on: Feb 25, 2026 02:18 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More