ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ

Edited By:

Updated on: Feb 21, 2026 | 5:14 PM

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕರೊಂದಿಗೆ ಅವರ ಇಬ್ಬರು ಪಿಎಗಳನ್ನೂ ಲೋಕಾಯುಕ್ತ ವಶಕ್ಕೆ ಪಡೆದಿದೆ. ಗುತ್ತಿಗೆದಾರರೊಬ್ಬರಿಂದ ರಸ್ತೆ ಕಾಮಗಾರಿಗೆ ಕಮಿಷನ್ ಪಡೆಯುತ್ತಿದ್ದಾಗ ಈ ಕಾರ್ಯಾಚರಣೆ ನಡೆಸಲಾಗಿದೆ.

ಗದಗ, ಫೆ.21: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಅವರು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅವರ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗುತ್ತಿಗೆದಾರರೊಬ್ಬರಿಂದ 5 ಲಕ್ಷ ರೂ. ಕಮಿಷನ್ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಏಕಾಏಕಿ ದಾಳಿ ನಡೆಸಿದರು. ರಸ್ತೆ ಪಕ್ಕದಲ್ಲಿ ಒಂದು ಕೋಟಿ ರೂಪಾಯಿ ಮೊತ್ತದ ವಾಲ್ ನಿರ್ಮಾಣ ಮಾಡುವ ಕೆಲಸಕ್ಕೆ ಶಾಸಕರು 12 ಪರ್ಸೆಂಟ್ ಕಮಿಷನ್ ಕೇಳಿದ್ದರು. ನಂತರ 11 ಪರ್ಸೆಂಟ್​​​ ಗೆ ವ್ಯವಹಾರ ಕುದುರಿತ್ತು ಎನ್ನಲಾಗಿದೆ. ಈ ಹಣವನ್ನು ಅವರ ಪಿಎ ಮೂಲಕ ಸ್ವೀಕರಿಸಲು ಸೂಚಿಸಿದಾಗ, ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಇದೀಗ ಅವರನ್ನು ವಶಪಡೆದುಕೊಂಡು ವಿಚಾರಣೆ ಕರೆದುಕೊಂಡು ಹೋಗುವ ದೃಶ್ಯ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More