ಟೀಂ ಇಂಡಿಯಾ ಹಾಗೂ ಗುರು ದ್ರಾವಿಡ್‌ಗೆ ಸದನದಲ್ಲಿ ಅಭಿನಂದನಾ ನಿರ್ಣಯ ಮಂಡಿಸುವಂತೆ ಆಗ್ರಹ
Assembly Session: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಅಂದರೆ ಸೋಮವಾರದಿಂದ ಆರಂಭವಾಗಿದೆ. ಈ ವೇಳೆ ರಾಜಾಜಿನಗರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮಾತನಾಡಿ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಕ್ಕೆ ಹಾಗೂ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಆಭಿನಂದನಾ ನಿರ್ಣಯ ಮಂಡಿಸುವಂತೆ ಆಗ್ರಹಿಸಿದರು.
ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಅಂದರೆ ಸೋಮವಾರದಿಂದ ಆರಂಭವಾಗಿದೆ. ಈ ವೇಳೆ ರಾಜಾಜಿನಗರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಮಾತನಾಡಿ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಕ್ಕೆ ಹಾಗೂ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಆಭಿನಂದನಾ ನಿರ್ಣಯ ಮಂಡಿಸುವಂತೆ ಆಗ್ರಹಿಸಿದರು. ಶಾಸಕರ ಮನವಿಗೆ ಪ್ರತಿಕ್ರಿಯಿಸಿದ ಸ್ಪೀಕರ್ ಯು.ಟಿ ಖಾದರ್, ಅದನ್ನು ಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದು, ಅಗಲಿದೆ ಗಣ್ಣರಿಗೆ ಸಂತಾಪ ಸೂಚಿಸಿದ ಬಳಿಕ ಮಾಡೋಣ ಎಂದರು.
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆದಿದ್ದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಬರೋಬ್ಬರಿ 17 ವರ್ಷಗಳ ಟಿ20 ವಿಶ್ವಕಪ್ ಎತ್ತಿಹಿಡಿದಿತ್ತು. ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ರೋಹಿತ್ ಪಡೆ ವಿಶ್ವಕಪ್ ಜಯಿಸುವಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪಾತ್ರ ಅಪಾರವಾಗಿತ್ತು. ಇದಲ್ಲದೆ ದ್ರಾವಿಡ್ ಅಧಿಕಾರಾವಧಿಯಲ್ಲಿ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಫ್ ಫೈನಲ್ ಹಾಗೂ ಏಕದಿನ ವಿಶ್ವಕಪ್ ಫೈನಲ್ ಸಹ ಆಡಿತ್ತು.