ಗುತ್ತಿಗೆದಾರರ ಆರೋಪಗಳನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿ ಸಿದ್ದರಾಮಯ್ಯ ಸರ್ಕಾರ ತನ್ನ ಸಾಚಾತನ ನಿರೂಪಿಸಲಿ: ಡಾ ಸಿಎನ್ ಅಶ್ವಥ್ ನಾರಾಯಣ

ಅರುಣ್​ ಕುಮಾರ್​ ಬೆಳ್ಳಿ

Updated on: Sep 05, 2023 | 4:36 PM

ಗುತ್ತಿಗೆದಾರರು ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಬೆಂಗಳೂರು: ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತಾಡಿದ ಅವರು, ಗುತ್ತಿಗೆದಾರರು (contractors) ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ (commission) ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯ ಸರ್ಕಾರ ಗುತ್ತಿಗೆದಾರರ ಆರೋಪಗಳನ್ನು ತನಿಖೆ ಮಾಡಿಸಲು, ಲೋಕಾಯುಕ್ತಕ್ಕೆ ನೀಡಿ ತಾನೆಷ್ಟು ಸಾಚಾ ಅಂತ ತೋರಿಸಲಿ ಅಂದು ಆಶ್ವಥ್ ನಾರಾಯಣ ಸವಾಲೆಸೆದರು. ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಸೇರಲಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ, ಕಾಂಗ್ರೆಸ್ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿರುವ ಮತ್ತು ಮುಳುಗುವ ಹಂತದಲ್ಲಿರುವ ಪಕ್ಷ, ಅದನ್ನು ಸೇರಲು ಯಾರು ತಾನೆ ಇಚ್ಛಿಸುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.