Madal Virupakshappa: ಮಗನ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕ ಬಳಿಕ ಕೆ ಎಸ್ ಡಿ ಎಲ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ!

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Mar 03, 2023 | 1:21 PM

ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂತಲೂ ಮಹಾನುಭಾವರು ಹೇಳಿದ್ದಾರೆ! ನಿಮ್ಮ ಮಗನ ಮನೆಯಿಂದಲೇ ಕೋಟಿಗಟ್ಟಲೆ ಹಣ ಬರಾಮತ್ತಾಗಿರೋದು ವಿರೂಪಾಕ್ಷಪ್ಪನವರೇ!!

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ನಿಯಮಿತದ (KSDL) ಅಧ್ಯಕ್ಷರಾಗಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಮವರು (Madal Virupakshappa) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅದೇ ಸಂಸ್ಥೆಯ ಸಾಬೂನುನಿಂದ ಕೈತೊಲೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಶುದ್ಧ ಕನ್ನಡವಲ್ಲದ, ತಪ್ಪು ಕಾಗುಣಿತಗಳ ರಾಜೀನಾಮೆ ಪತ್ರವನ್ನು ಮಾಡಾಳ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸಲ್ಲಿಸಿದ್ದಾರೆ. ಪತ್ರದಲ್ಲಿ ಮಾಡಾಳ್ ಸೀನಿಯರ್ ತನಗೂ ಪ್ರಕರಣಕ್ಕೂ ಸಂಬಂಧವಿಲ್ಲ ಅಂತ ಹೇಳಿರುವುದು ಆಶ್ಚರ್ಯ ಹುಟ್ಟಿಸುತ್ತದೆ. ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂತಲೂ ಮಹಾನುಭಾವರು ಹೇಳಿದ್ದಾರೆ! ನಿಮ್ಮ ಮಗನ ಮನೆಯಿಂದಲೇ ಕೋಟಿಗಟ್ಟಲೆ ಹಣ ಬರಾಮತ್ತಾಗಿರೋದು ವಿರೂಪಾಕ್ಷಪ್ಪನವರೇ!!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 03, 2023 01:20 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.