ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಎರಡು ದಿನ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಆರ್ಆರ್ ನಗರ ಶಾಸಕ ಮುನಿರತ್ನರನ್ನ ಇವತ್ತು(ಮಂಗಳವಾರ) ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಶಾಸಕ ಮುನಿರತ್ನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ನಾಳೆವರೆಗೂ ಮುನಿರತ್ನರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಬೆಂಗಳೂರು, ಸೆ.17: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನಲೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಎರಡು ದಿನ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಮುನಿರತ್ನರನ್ನ ಇವತ್ತು(ಮಂಗಳವಾರ) ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಶಾಸಕ ಮುನಿರತ್ನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ನಾಳೆವರೆಗೂ ಮುನಿರತ್ನರನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ