ಬೆಂಗಾವಲು ವಾಹನ ಡ್ರೈವರ್ ಆತ್ಮಹತ್ಯೆ: ಆಸ್ಪತ್ರೆಗೆ ಬಂದು ಕಣ್ಣೀರಿಟ್ಟ ಅಶೋಕ್

Updated on: Oct 08, 2025 | 10:56 PM

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ. ಇಂದು (ಅಕ್ಟೋಬರ್ 08) ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಅಶೋಕ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿ ಶರಣಗೌಡ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಭಾವುಕರಾದರು.

ಬೆಂಗಳೂರು, (ಅಕ್ಟೋಬರ್ 08): ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ. ಇಂದು (ಅಕ್ಟೋಬರ್ 08) ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಅಶೋಕ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿ ಶರಣಗೌಡ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಭಾವುಕರಾದರು.

ಇದನ್ನೂ ಓದಿ: ವಿಪಕ್ಷ ನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ, ಕಾರಣ?

Published on: Oct 08, 2025 10:53 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More