ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ರಮೇಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

Edited By:

Updated on: Jun 14, 2026 | 5:39 PM

ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ  ರಮೇಶ್ ಜಾರಕಿಹೊಳಿ (Ramesh Jarkiholi) ಖುಷಿ ಪಟ್ಟಿದ್ದಾರೆ.

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ  ರಮೇಶ್ ಜಾರಕಿಹೊಳಿ (Ramesh Jarkiholi) ದೇವರು ಒಳ್ಳೆಯದು ಮಾಡಿದ್ದಾನೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿಂದು ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗದೇ ಇರುವುದು ಒಳ್ಳೆಯದಾಗಿದೆ. ಕಾರಣ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಆಧ್ಯಕ್ಷ ಆಗದೇ ಇರುವುದು ದೇವರೇ ಒಳ್ಳೆಯದನ್ನ ಮಾಡಿದ್ದಾನೆ. ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿದ್ದರೇ ನಮಗ ತೊಂದರೆ ಆಗುತ್ತಿತ್ತು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 14, 2026 04:43 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More