ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ

Edited By:

Updated on: Apr 26, 2026 | 9:51 AM

ಬೀದರ್ ಜಿಲ್ಲೆಯ ಬಸವಕಲ್ಯಾಣ ಸಮೀಪ ಅಕ್ರಮ ಗೋ ಸಾಗಾಟ ವಾಹನ ತಡೆದು ಬಿಜೆಪಿ ಶಾಸಕ ಶರಣು ಸಲಗರ 23 ಗೋವುಗಳನ್ನು ರಕ್ಷಿಸಿದ್ದಾರೆ. ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಬೇಕಾಬಿಟ್ಟಿಯಾಗಿ ವಾಹನಗಳಲ್ಲಿ ಗೋವುಗಳನ್ನು ತುಂಬಿಕೊಂಡು ಆರೋಪಿಗಳು ಸಾಗಾಟ ಮಾಡುತ್ತಿರೋದು ಈ ವೇಳೆ ಪತ್ತೆಯಾಗಿದೆ.

ಬೀದರ್, ಏಪ್ರಿಲ್​​ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More