ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಶಾಸಕ ಸುರೇಶ್ ಗೌಡ ಹೇಳಿದ್ದೇನು? ಇಲ್ಲಿದೆ ನೋಡಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ಬಿಜೆಪಿ ಶಾಸಕ ಸುರೇಶ್ ಗೌಡ ನೀಡಿರುವ ಮಾಹಿತಿ ಇಲ್ಲಿದೆ.
ನೆಲಮಂಗಲ, ಜೂನ್ 24: ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Anantkumar Hegde) ವಿರುದ್ಧ ಕೇಳಿಬಂದಿರುವ ಹಲ್ಲೆ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅವರು, ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಸಣ್ಣಮಟ್ಟಿನ ಕಾರು ಅಪಘಾತದಿಂದ ಗಲಾಟೆ ನಡೆದಿದೆ ಎಂದ ಅವರು, ಅನಂತ್ ಕುಮಾರ್ ಹೆಗಡೆ ಹಾಗೂ ಹಲ್ಲೆಗೊಳಗಾದವರ ಬಳಿ ಮಾತುಕತೆ ನಡೆಸಿದ್ದೇನೆ. ಮುಸ್ಲಿಂ ಮುಖಂಡರ ಬಳಿಯೂ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ. ಸುರೇಶ್ ಗೌಡ ಮಾತಿನ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ನೆಲಮಂಗಲ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್ಮ್ಯಾನ್, ಚಾಲಕನ ವಿರುದ್ಧ ಎಫ್ಐಆರ್
Published on: Jun 24, 2025 08:06 AM
Latest Videos