ಪಿಎಸ್‌ಐ ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; 10 ದಿನಗಳ ಬಳಿಕ ವೀಡಿಯೋ ವೈರಲ್

Edited By:

Updated on: Aug 25, 2026 | 1:18 PM

ಶ್ರೀರಂಗಪಟ್ಟಣದಲ್ಲಿ ಭೀಮನ ಅಮಾವಾಸ್ಯೆ ದಿನದಂದು ಬಿಜೆಪಿ ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರು ಪಿಎಸ್ಐ ಸವಿತಾ ಅವರಿಗೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗರ್ಭಗುಡಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ವೀಡಿಯೋಗಳು ವೈರಲ್ ಆಗಿದ್ದು, ಶಾಸಕ ಸುರೇಶ್ ಗೌಡರು ತಮ್ಮ ಮಗಳ ವರ್ತನೆಗೆ ಕ್ಷಮೆ ಯಾಚಿಸಿದ್ದಾರೆ.

ಮಂಡ್ಯ, ಆಗಸ್ಟ್ 25: ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿ ಭೀಮನ ಅಮಾವಾಸ್ಯೆಯಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾ ಲೇಡಿ ಪಿಎಸ್‌ಐ ಸವಿತಾ ಪಾಟೀಲ್​ಗೆ ಕಪಾಳ ಮೋಕ್ಷ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಶಾಸಕ ಸುರೇಶ್ ಗೌಡರು ಪ್ರತಿಕ್ರಿಯಿಸಿದ್ದು, ತಮ್ಮ ಪುತ್ರಿ ತಪ್ಪು ಮಾಡಿದ್ದಾಳೆ ಎಂದು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದರು. ಆದರೆ ಅಧಿಕಾರಿ ಮತ್ತು ಐಶ್ವರ್ಯಾ ನಡುವೆ ನಡೆದಿದ್ದ ಗಲಾಟೆಯ ವಿಡಿಯೋ 10 ದಿನಗಳ ಬಳಿಕ ವೈರಲ್ ಆಗಿದೆ.

ಮಕ್ಕಳೊಂದಿಗೆ ಬಂದಿದ್ದ ಐಶ್ವರ್ಯಾರನ್ನು ಗರ್ಭಗುಡಿಗೆ ಬಿಡದಿದ್ದಾಗ ಮಾತಿನ ಚಕಮಕಿ ನಡೆದು, ಪಿಎಸ್‌ಐ ಅವಾಚ್ಯ ಶಬ್ದ ಬಳಸಿದ್ದಕ್ಕೆ ಐಶ್ವರ್ಯಾ ಕಪಾಳಮೋಕ್ಷ ಮಾಡಿದ್ದರು ಎನ್ನಲಾಗಿದೆ. ಈ ಹಿಂದೆ ಐಶ್ವರ್ಯಾ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಾಗಿತ್ತು. ಆದರೆ, ಇದೀಗ ವೈರಲ್ ವಿಡಿಯೋದಲ್ಲಿ ಪಿಎಸ್‌ಐ ಸವಿತಾ ಅವರೇ ಮೊದಲು ದರ್ಪ ತೋರಿರುವುದು ಕಂಡುಬಂದಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ. ಸಿಸಿಟಿವಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಶಾಸಕ ಸುರೇಶ್‌ಗೌಡ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More