ಸಭಾಧ್ಯಕ್ಷ ಯುಟಿ ಖಾದರ್ ಬಿಜೆಪಿ ಶಾಸಕರ ಸಸ್ಪೆನ್ಷನ್ ವಾಪಸ್ಸು ತೆಗೆದುಕೊಳ್ಳುವವರೆಗೆ ಪ್ರತಿಭಟನೆ: ವಿಜಯೇಂದ್ರ
ಸಭಾಧ್ಯಕ್ಷ ಯುಟಿ ಖಾದರ್ ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿರುವ ಕ್ರಮವನ್ನು ಹಿಂದಕ್ಕೆ ಪಡೆಯಬೇಕು, ಎಲ್ಲಿಯವರೆಗೆ ಅವರು ತಮ್ಮ ನಿರ್ಣಯವನ್ನು ಹಿಂಪಡೆಯುವ ನಿರ್ಧಾರ ತೆಗೆದುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್ ಗಳಲ್ಲಿ ಭಾಗಿಯಾಗುವುದಿಲ್ಲವೆಂದು ವಿಜಯೇಂದ್ರ ಹೇಳಿದರು. ಖಾದರ್ ಅವರಿನ್ನೂ ಪ್ರತಿಕ್ರಿಯೆ ನೀಡಿಲ್ಲ.
ಬೆಂಗಳೂರು, ಮಾರ್ಚ್ 29: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಮುಖಂಡರ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಬಿವೈ ವಿಜಯೇಂದ್ರ, ಬಜೆಟ್ ಅಧಿವೇಶನದ ಕೊನೆಯ ದಿನ ಸಭಾಧ್ಯಕ್ಷ ಯುಟಿ ಖಾದರ್ 18 ಬಿಜೆಪಿ ಶಾಸಕರನ್ನು 6 ತಿಂಗಳ ಅವಧಿಗೆ ಅಮಾನತ್ತು ಮಾಡಿರುವುದು ಸಂವಿಧಾನಬಾಹಿರವಾಗಿದೆ, ಅವರ ನಿರ್ಧಾರವನ್ನು ವಿರೋಧಿಸಿ ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಯ ಮುಂದೆ ಬಿಜೆಪಿಯ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಒಗ್ಗೂಡಿ ಪ್ರತಿಭಟನೆ ನಡೆಸಬೇಕೆಂಬ ನಿರ್ಣಯವನ್ನು ಇವತ್ತಿನ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಮುಸಲ್ಮಾನರಿಗೆ ಮೀಸಲಾತಿ ನೀಡಿದ್ದನ್ನು ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಉಗ್ರವಾಗಿ ವಿರೋಧಿಸುತ್ತದೆ: ವಿಜಯೇಂದ್ರ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos