ಸಭಾಧ್ಯಕ್ಷ ಯುಟಿ ಖಾದರ್ ಬಿಜೆಪಿ ಶಾಸಕರ ಸಸ್ಪೆನ್ಷನ್ ವಾಪಸ್ಸು ತೆಗೆದುಕೊಳ್ಳುವವರೆಗೆ ಪ್ರತಿಭಟನೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Mar 29, 2025 | 4:01 PM

ಸಭಾಧ್ಯಕ್ಷ ಯುಟಿ ಖಾದರ್ ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿರುವ ಕ್ರಮವನ್ನು ಹಿಂದಕ್ಕೆ ಪಡೆಯಬೇಕು, ಎಲ್ಲಿಯವರೆಗೆ ಅವರು ತಮ್ಮ ನಿರ್ಣಯವನ್ನು ಹಿಂಪಡೆಯುವ ನಿರ್ಧಾರ ತೆಗೆದುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್ ಗಳಲ್ಲಿ ಭಾಗಿಯಾಗುವುದಿಲ್ಲವೆಂದು ವಿಜಯೇಂದ್ರ ಹೇಳಿದರು. ಖಾದರ್ ಅವರಿನ್ನೂ ಪ್ರತಿಕ್ರಿಯೆ ನೀಡಿಲ್ಲ.

ಬೆಂಗಳೂರು, ಮಾರ್ಚ್ 29: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಮುಖಂಡರ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಬಿವೈ ವಿಜಯೇಂದ್ರ, ಬಜೆಟ್ ಅಧಿವೇಶನದ ಕೊನೆಯ ದಿನ ಸಭಾಧ್ಯಕ್ಷ ಯುಟಿ ಖಾದರ್ 18 ಬಿಜೆಪಿ ಶಾಸಕರನ್ನು 6 ತಿಂಗಳ ಅವಧಿಗೆ ಅಮಾನತ್ತು ಮಾಡಿರುವುದು ಸಂವಿಧಾನಬಾಹಿರವಾಗಿದೆ, ಅವರ ನಿರ್ಧಾರವನ್ನು ವಿರೋಧಿಸಿ ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಯ ಮುಂದೆ ಬಿಜೆಪಿಯ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಒಗ್ಗೂಡಿ ಪ್ರತಿಭಟನೆ ನಡೆಸಬೇಕೆಂಬ ನಿರ್ಣಯವನ್ನು ಇವತ್ತಿನ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:    ಮುಸಲ್ಮಾನರಿಗೆ ಮೀಸಲಾತಿ ನೀಡಿದ್ದನ್ನು ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಉಗ್ರವಾಗಿ ವಿರೋಧಿಸುತ್ತದೆ: ವಿಜಯೇಂದ್ರ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.