AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 23, 2026 | 2:33 PM

Share

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ.

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ.

ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಶಾಸಕ ಡಾ.ಚಂದ್ರು ಲಮಾಣಿ ಬಗ್ಗೆ ನಾನು ಮಾತನಾಡಿರೋದು ಸತ್ಯ. ಆಡಿಯೋದಲ್ಲಿ ಇರುವ ಧ್ವನಿ ನನ್ನದೇ ನಾನೇ ಮಾತನಾಡಿರುವುದು. 6 ತಿಂಗಳ ಹಿಂದೆ ಚಂದ್ರು ಲಮಾಣಿ ಬಗ್ಗೆ ಮಾತಾಡಿರೋ ಆಡಿಯೋ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮಾತಾಡಿದ್ದೆ. ಆದ್ರೆ, ಲೋಕಾಯುಕ್ತ ದಾಳಿಗೂ ನಾನು ಮಾತಾಡಿದ ಆಡಿಯೋಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ ಲೋಕಾಯುಕ್ತ ಟ್ರ್ಯಾಪ್​​​ಗೂ ನನ್ನ ಆಡಿಯೋಗೂ ಸಂಬಂಧವಿಲ್ಲ. ಬೇಕಿದ್ದರೆ ಆಡಿಯೋ ಬಗ್ಗೆ ತನಿಖೆ ನಡೆಸಲಿ. ಶಾಸಕರು ನನ್ನನ್ನು ಗ್ರಾಮದಿಂದ ಓಡಿಸಲು ಸಂಚು ರೂಪಿಸಿದ್ದರು. 18 ಲಕ್ಷ ರೂಪಾಯಿ ಖರ್ಚು ಮಾಡಿ ಮಠದಿಂದ ಓಡಿಸಲು ಪ್ಲ್ಯಾನ್​ ಮಾಡಿದ್ರು. ಇಡೀ ಕ್ಷೇತ್ರದಲ್ಲಿ ಶಾಸಕರ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿತ್ತು ಎಂದು ಶಾಸಕ ಚಂದ್ರು ಲಮಾಣಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More