AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್, ವಿಜಯೇಂದ್ರ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್, ವಿಜಯೇಂದ್ರ

ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jun 23, 2026 | 4:29 PM

Share

Karnataka Politics News: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Poll) ನಡೆದ ಅಡ್ಡಮತದಾನ (cross Voting) ರಾಜ್ಯ ಬಿಜೆಪಿಯಲ್ಲಿ ಸಂಚಲನ ಮುಡಿಸಿದ್ದು, ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆ ಮಾಡಲು ಇನ್ನಿಲ್ಲಕ ಕಸರತ್ತು ನಡೆದಿದೆ. ಇನ್ನೊಂದೆಡೆ ಹೈಕಮಾಂಡ್ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮಾತುಕತೆ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದು, ಸೂಕ್ತ ಕ್ರಮದ ಬಗ್ಗೆಯೂ ಖಡಕ್ ಆಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ, (ಜೂನ್ 23): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Poll) ನಡೆದ ಅಡ್ಡಮತದಾನ (cross Voting) ರಾಜ್ಯ ಬಿಜೆಪಿಯಲ್ಲಿ ಸಂಚಲನ ಮುಡಿಸಿದ್ದು, ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆ ಮಾಡಲು ಇನ್ನಿಲ್ಲಕ ಕಸರತ್ತು ನಡೆದಿದೆ. ಇನ್ನೊಂದೆಡೆ ಹೈಕಮಾಂಡ್ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮಾತುಕತೆ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದು, ಸೂಕ್ತ ಕ್ರಮದ ಬಗ್ಗೆಯೂ ಖಡಕ್ ಆಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ರಾಷ್ಟ್ರೀಯ ಅಧ್ಯಕ್ಷರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶೋಕ್, ನಾವು ಅಧ್ಯಕ್ಷರು ನಾವೆಲ್ಲರೂ ಭೇಟಿ ಮಾಡಿದ್ದೇವೆ. ಅಡ್ಡಮತದಾನದ ಬಗ್ಗೆ ಎಲ್ಲವೂ ಅವರಿಗೆ ಹೇಳಿದ್ದೇವೆ. ನಮಗೂ ಮೊದಲೇ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಯಾರು ಅಂತಾ ತೆಗೆದುಕೊಂಡಿದ್ದಾರೆ. ಘಟನೆ ಬಗ್ಗೆ ರಾಷ್ಟ್ರೀಯ ನಾಯಕರು ಸರಿಯಾದ ಸಮಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪರಿಷತ್​ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯ ನಾಯಕರಿಗೆ ಮಹತ್ವದ​​ ಸೂಚನೆ ನೀಡಿದ ಬಿಜೆಪಿ ಹೈಕಮಾಂಡ್​​

Follow Us