ಬಂಗಾಳದ ವಿಧಾನಸಭೆಯಲ್ಲಿ ಹೈಡ್ರಾಮಾ; ಬಿಜೆಪಿ ನಾಯಕನನ್ನು ಸದನದಿಂದ ಎಳೆದುಕೊಂಡು ಹೋದ ಮಾರ್ಷಲ್ಗಳು
ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಇಂದು ಆವೇಶಭರಿತ ಭಾಷಣ ಮಾಡಿದ್ದಾರೆ. ಬಂಗಾಳಿ ವಲಸಿಗರ ಮೇಲಿನ ದೌರ್ಜನ್ಯದ ಕುರಿತು ಮಮತಾ ಬ್ಯಾನರ್ಜಿ ಸರ್ಕಾರದ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆಯಿತು. ಸೆಪ್ಟೆಂಬರ್ 2 ರಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನು ಅಮಾನತುಗೊಳಿಸಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು.
ಕೊಲ್ಕತ್ತಾ, ಸೆಪ್ಟೆಂಬರ್ 4: ಪಶ್ಚಿಮ ಬಂಗಾಳದ ವಿಧಾನಸಭಾ ಕಲಾಪ ಇಂದು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ದೇಶದ ವಿವಿಧ ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸಿಗರನ್ನು ಗುರಿಯಾಗಿಸುವ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಘೋಷಣೆ ಕೂಗಿ ಗದ್ದಲ ಸೃಷ್ಟಿಸಿದ ಪಶ್ಚಿಮ ಬಂಗಾಳ (West Bengal) ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ಶಂಕರ್ ಘೋಷ್ ಅವರಿಗೆ ಹೊರಹೋಗುವಂತೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಆದೇಶಿಸಿದರು. ಆದರೂ ಕೇಳದ ಶಂಕರ್ ಘೋಷ್ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಗಲಾಟೆ ಸೃಷ್ಟಿಸಿದರು. ಈ ವೇಳೆ ವಿಧಾನಸಭೆಯ ಭದ್ರತಾ ಸಿಬ್ಬಂದಿ ಅವರನ್ನು ಬಲವಂತವಾಗಿ ಎತ್ತಿಕೊಂಡು ಹೊರದಬ್ಬಿದರು. ಈ ವೇಳೆ ಗಲಾಟೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆ್ಯಂಬುಲೆನ್ಸ್ ಅನ್ನು ಕರೆಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

