ಸಚಿವ ಈಶ್ವರಪ್ಪ ಸಭೆಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ ಕೆಂಡ ಕಾರಿದರು!
ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿ, ಕ್ರಮ ತೆಗೆದುಕೊಳ್ಳುವ ಪ್ರಯತ್ನ ಮಾಡಿದರೂ ಮಂಜುನಾಥ ಅವರ ಕೋಪ ಆರಲಿಲ್ಲ. ರಾಜಕಾರಿಗಳ ಥರ ಅಧಿಕಾರಿಗಳು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ಅವರು ತೀಕ್ಷ್ಣವಾಗಿ ಕಿಡಿ ಕಾರಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪನವರು ಸೋಮವಾರ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆಸಿದ ಸಭೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಅವರು ಬೆಂಕಿಯುಗುಳುವುದು ಕಂಡು ಬಂತು. ಸಚಿವರು, ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಮೊದಲಾದವರ ಸಮ್ಮುಖದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಮಂಜುನಾಥ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅವರು ರೌದ್ರಾವಾತಾರ ತಳೆಯುವುದಕ್ಕೆ ಅಧಿಕಾರಿಗಳು ಯಾವುದೇ ವಿಷಯವನ್ನು ತಮ್ಮ ಗಮನಕ್ಕೆ ತಾರದೆ, ಸಭೆಗಳಿಗೆ ತಮ್ಮನ್ನು ಅಹ್ವಾನಿಸದೆ ಅವಮಾನಿಸುತ್ತಿರುವುದು, ಸಚಿವರ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಆದೇಶ ಮತ್ತು ಸುತ್ತೋಲೆಗಳನ್ನು ಉಲ್ಲಂಘಿಸುತ್ತಿರುವುದು ಆಗಿತ್ತು. ಜಿಲ್ಲಾಧಿಕಾರಿ ಮತ್ತು ಜಿ ಪಂ ಸಿಇಓಗೆ ದೂರು ಸಲ್ಲಿಸಿದರೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವುಧೇ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.
ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿ, ಕ್ರಮ ತೆಗೆದುಕೊಳ್ಳುವ ಪ್ರಯತ್ನ ಮಾಡಿದರೂ ಮಂಜುನಾಥ ಅವರ ಕೋಪ ಆರಲಿಲ್ಲ. ರಾಜಕಾರಿಗಳ ಥರ ಅಧಿಕಾರಿಗಳು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ಅವರು ತೀಕ್ಷ್ಣವಾಗಿ ಕಿಡಿ ಕಾರಿದರು. ಸರ್ಕಾರದಿಂದ ಬಿಡುಗಡೆಯಾದ ಅನುದಾನ, ಪರಿಹಾರ ಕಾರ್ಯಗಳಿಗೆ ವಿತರಿಸಲಾದ ಹಣ ಮೊದಲಾದ ಯಾವ ವಿಷಯವನ್ನೂ ತಮ್ಮ ಗಮನಕ್ಕೆ ತಾರದೆ ಕತ್ತೆಲೆಯಲ್ಲಿ ಇಡಲಾಗುತ್ತಿದೆ, ಇವರಿಗೆ ತಾನು ಶಾಸಕನ ಹಾಗೆ ಕಾಣಿವುದಿಲ್ಲವೇ ಎಂದು ತಮ್ಮ ಆಕ್ರೋಶ ಹೊರ ಹಾಕಿದರು.
ಸಚಿವ ಈಶ್ವರಪ್ಪನವರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ನಂತರ ಸ್ವಲ್ಪ ಮೆತ್ತಗಾದ ಮುಂಜುನಾಥ ಅವರು, ತಾಲೂಕು ಮಟ್ಟದಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಸಚಿವರ ಗಮನಕ್ಕೆ ತರುವುದಷ್ಟೇ ತಮ್ಮ ಉದ್ದೇಶವಾಗಿತ್ತು. ಸಭೆ ನಡೆಯದಂತೆ ತಡೆಯುವ ದುರುದ್ದೇಶ ತಮಗೆ ಇಲ್ಲ ಎಂದು ಹೇಳಿ ತಮ್ಮ ಸ್ಥಾನಕ್ಕೆ ಹೋಗಿ ಕುಳಿತರು.
ಇದನ್ನೂ ಓದಿ: ಕೆಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ; ಸಂಪುಟದಿಂದ ಕೈಬಿಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಒತ್ತಾಯ