CT Ravi press conference Live: ಬೆಂಗಳೂರಿಗೆ ಬಂದ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಶಬ್ಧದಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಸಿಟಿ ರವಿ ಅವರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇದರ ಬೆನ್ನಲ್ಲೇ ಸಿಟಿ ರವಿ ಅವರು ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಇನ್ನು ಇವರನ್ನು ನಾಯಕರು ಭರ್ಜರಿಯಾಗಿ ಬರಮಾಡಿಕೊಂಡಿದ್ದಾರೆ. ಇನ್ನು ಇದೇ ವೇಲೆ ಸಿಟಿ ರವಿ ಸುದ್ದಿಗೋಷ್ಠಿ ನಡೆಸಿದ್ದಾರೆ
ಬೆಂಗಳೂರು (ಡಿಸೆಂಬರ್ 21): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಕೇಸ್ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಾವುದೇ ನೋಟಿಸ್ ನೀಡದೆ ಬಂಧಿಸಿದ ಕಾರಣ ಸಿ.ಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ನಿನ್ನೆ(ಡಿಸೆಂಬರ್ 20) ಮಧ್ಯಂತರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದ ಪೊಲೀಸರು ಮಾರ್ಗಮಧ್ಯ ದಾವಣಗೆರೆಯಲ್ಲಿ ಸಿಟಿ ರವಿ ಅವರನ್ನು ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಸಿಟಿ ರವಿ ಆವರನ್ನು ನಾಯಕರು ಸ್ವಾಗತಿ ಕೋರಿದರು. ಇನ್ನು ಇದೇ ವೇಳೆ ಸಿಟಿ ರವಿ ಅವರು ಸುದ್ದಿಗೋಷ್ಠಿ ನಡೆಸಿದ್ದು ಅದರ ನೇರಪ್ರಸಾರ ಇಲ್ಲಿದೆ.
Published on: Dec 21, 2024 11:51 AM
Latest Videos