CT Ravi Press Meet Live: ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
BJP MLC CT Ravi Press Conference Live Streaming: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಸಿಟಿ ರವಿ ಅವರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇದರ ಬೆನ್ನಲ್ಲೇ ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದ ಪೊಲೀಸರು ಮಾರ್ಗದಲ್ಲೇ ಸಿಟಿ ರವಿ ಅವರನ್ನು ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಿಟಿ ರವಿ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು ಅದರ ನೇರಪ್ರಸಾರ ಇಲ್ಲಿದೆ.
ದಾವಣಗೆರೆ, (ಡಿಸೆಂಬರ್ 20): ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಕೇಸ್ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಾವುದೇ ನೋಟಿಸ್ ನೀಡದೆ ಬಂಧಿಸಿದ ಕಾರಣ ಸಿ.ಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಹೀಗಾಗಿ ಬೆಳಗಾವಿಯಿಂದ ಬೆಂಗಳೂರು ಕೋರ್ಟ್ಗೆ ಕರೆದುಕೊಂಡು ಬರುತ್ತಿದ್ದ ಪೊಲೀಸರು ಮಾರ್ಗ ಮಧ್ಯೆಯೇ ಸಿಟಿ ರವಿ ಅವರನ್ನು ತಮ್ಮ ವಶದಿಂದ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಿಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.
Latest Videos