ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿಎಂ ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

Edited By:

Updated on: May 20, 2026 | 3:17 PM

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂಎಲ್‌ಸಿ ಎಚ್‌.ವಿಶ್ವನಾಥ್‌, ಈ ಪ್ರಕರಣದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕುಮ್ಮಕ್ಕಿದೆ. ಪ್ರಕರಣ ಸಂಬಂಧ ಪೊಲೀಸರ ನೋಟಿಸ್​ಗೆ ಉತ್ತರ ಕೊಟ್ಟಿದ್ದೇನೆ. ಆದರೂ ಕೂಡ ಎಫ್‌ಐಆರ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಇದರಲ್ಲಿ ಯತೀಂದ್ರ ಕುಮ್ಮಕ್ಕು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು, (ಮೇ 20):ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂಎಲ್‌ಸಿ ಎಚ್‌.ವಿಶ್ವನಾಥ್‌, ಈ ಪ್ರಕರಣದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕುಮ್ಮಕ್ಕಿದೆ. ಪ್ರಕರಣ ಸಂಬಂಧ ಪೊಲೀಸರ ನೋಟಿಸ್​ಗೆ ಉತ್ತರ ಕೊಟ್ಟಿದ್ದೇನೆ. ಆದರೂ ಕೂಡ ಎಫ್‌ಐಆರ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಇದರಲ್ಲಿ ಯತೀಂದ್ರ ಕುಮ್ಮಕ್ಕು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಿನಗೆ ಸಾಲ ಕೊಡಲು 55 ಲಕ್ಷ ರೂಪಾಯಿ ಎಲ್ಲಿಂದ ಬಂತು? ನಾನು 50 ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನಾನು ಸದನದಲ್ಲೇ‌ ಸತ್ಯವಂತ ಎಂದು ಪ್ರಮಾಣ ಮಾಡಿದ್ದೇನೆ. ಕೋಟೆಹುಂಡಿ ಮಹದೇವ ನಮ್ಮ ಮನೆ ಮುಂದೆ ಬಂದು ನಿಲ್ಲುತ್ತಿದ್ದ. ಸಿದ್ದರಾಮಯ್ಯ ಮಗನನ್ನು ನಾನು ಹೆಚ್​ಎಂ ಎಂದು ಹೇಳಿದ್ದೆ. ಈಗ ಅದನ್ನು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಫ್‌ಐಆರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಎಂದರು.

ಇದನ್ನೂ ನೋಡಿ: ನನ್ನ ಮಕ್ಕಳು ಸಹ ಸ್ಪರ್ಧಿಸಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ

Follow Us