AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ

ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ

ರಾಮ್​, ಮೈಸೂರು
| Edited By: |

Updated on: May 07, 2026 | 2:32 PM

Share

ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. . ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ. ಆದ್ರೆ, ಈ ಕಾರ್ಯಕ್ರಮಕ್ಕೆ ಸ್ವಪಕ್ಷದವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು...ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಬಿಜೆಪಿ ಪರಿಷತ್ ಸದಸ್ಯ ಹೆಚ್​.ವಿಶ್ವನಾಥ್​ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು, (ಮೇ 07): ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು (yediyurappa Abhimanotsava) ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. . ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ. ಆದ್ರೆ, ಈ ಕಾರ್ಯಕ್ರಮಕ್ಕೆ ಸ್ವಪಕ್ಷದವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು…ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಬಿಜೆಪಿ ಪರಿಷತ್ ಸದಸ್ಯ ಹೆಚ್​.ವಿಶ್ವನಾಥ್​  (BJP MLC H Vishwanath) ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಇದೀಗ ಅವರ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More