ಬೆಂಗಳೂರು: ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಯೋಗಕ್ಷೇಮ ವಿಚಾರಿಸಿದ ಬಿಜೆಪಿ ನಾಯಕ ಹೆಚ್ ವಿಶ್ವನಾಥ
ವಿಶ್ವನಾಥ ಅವರು ಮಂಗಳವಾರ ಸಿದ್ದರಾಮಯ್ಯನವರ ಯೋಗಕ್ಷೇಮ ವಿಚಾರಿಸಲು ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಆಗಮಿಸಿದ್ದರು. ಅವರ ಭೇಟಿಯ ಬಗ್ಗೆ ಹಲವಾರು ಊಹಾಪೋಹಗಳು ಹುಟ್ಟಿಕೊಂಡಿವೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (H Vishwanath) ಈಗ ಪ್ರತಿನಿಧಿಸುವ ಪಕ್ಷಗಳು ಬೇರೆ ಬೇರೆಯಾದರೂ ಅವರ ನಡುವೆ ಈಗಲೂ ಗಾಢವಾದ ಸ್ನೇಹವಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಕಳೆದ ಕೆಲವು ದಿನಗಳಿಂದ ಸಿದ್ದರಾಮಯ್ಯ ಅವರ ಆರೋಗ್ಯದ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಅವರನ್ನು ತಪಾಸಣೆ ನಡೆಸಿರುವ ವೈದ್ಯರು ಯಾವುದೇ ಸಮಸ್ಯೆ ಇಲ್ಲ ಅಂತ ಹೇಳಿದ ಮೇಲೆ ಅವರು ಪುನಃ ಎಂದಿನಂತೆ ಓಡಾಡುತ್ತಿದ್ದಾರೆ. ವಿಶ್ವನಾಥ ಅವರು ಮಂಗಳವಾರ ಸಿದ್ದರಾಮಯ್ಯನವರ ಯೋಗಕ್ಷೇಮ ವಿಚಾರಿಸಲು ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಆಗಮಿಸಿದ್ದರು. ಅವರ ಭೇಟಿಯ ಬಗ್ಗೆ ಹಲವಾರು ಊಹಾಪೋಹಗಳು ಹುಟ್ಟಿಕೊಂಡಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos