ನನ್ನ ಮಕ್ಕಳು ಸಹ ಸ್ಪರ್ಧಿಸಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ

Edited By:

Updated on: May 07, 2026 | 3:00 PM

ಕರ್ನಾಟಕದ ಹಿರಿಯ ರಾಜಕಾರಣಿ, ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ (H Vishwanath)​ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ಸಕ್ರೀಯ ರಾಜಕಾರಣದಲ್ಲಿ ಇರುತ್ತಾರೆ. ಆದ್ರೆ,ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ.

ಮೈಸೂರು, (ಮೇ,7): ಕರ್ನಾಟಕದ ಹಿರಿಯ ರಾಜಕಾರಣಿ, ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ (H Vishwanath)​ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ಸಕ್ರೀಯ ರಾಜಕಾರಣದಲ್ಲಿ ಇರುತ್ತಾರೆ. ಆದ್ರೆ,ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣೆಗೆ ಸ್ಪರ್ಧಿಸಿದಾಗ ಜನರೇ ಹಣ ನೀಡಿ ಆಶೀರ್ವದಿಸಿದ್ದರು ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಲು 50 ಕೋಟಿ ರೂಪಾಯಿ ಹಣ ಬೇಕು. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ನನಗಿಲ್ಲ. ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 07, 2026 02:53 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More