ಸಿಎಂ ಕಾರಿನಲ್ಲಿ ಓಡಾಟ: ಕೊನೆಗೂ ಸ್ಪಷ್ಟನೆ ಕೊಟ್ಟ ಬಿಜೆಪಿ MLC, ಹೇಳಿದ್ದೇನು?
ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಕಾರಿನಲ್ಲಿ ಪ್ರತ್ಯಕ್ಷರಾಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಇದೀಗ ಸ್ವತಃ ರವಿಕುಮಾರ್ ಅವರು ಪ್ರತಿಕ್ರಿಯಿಸಿದ್ದು, 33 ಜನರಿಗೆ ಬಂದಿರುವ ಅಪರೂಪದ ಖಾಯಿಲೆ ಬಗ್ಗೆ ಸಿಎಂ ಭೇಟಿ ಮಾಡಿದ್ದೆ. ಕಾರಿನಲ್ಲಿ ಹೋಗುತ್ತಾ ಮಾತನಾಡೋಣ ಎಂದು ಅವರೇ ಹೇಳಿದ್ದರು. ಹೀಗಾಗಿ ಅವರ ಕಾರಿನಲ್ಲಿ ಮಾತನಾಡುತ್ತಾ ಬಂದಿರುವುದಾಗಿ ಸ್ಪಷ್ಟಪಡಿಸಿದರು.
ಬೆಂಗಳೂರು, (ಅಕ್ಟೋಬರ್ 30): ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಕಾರಿನಲ್ಲಿ ಪ್ರತ್ಯಕ್ಷರಾಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಇದೀಗ ಸ್ವತಃ ರವಿಕುಮಾರ್ ಅವರು ಪ್ರತಿಕ್ರಿಯಿಸಿದ್ದು, 33 ಜನರಿಗೆ ಬಂದಿರುವ ಅಪರೂಪದ ಖಾಯಿಲೆ ಬಗ್ಗೆ ಸಿಎಂ ಭೇಟಿ ಮಾಡಿದ್ದೆ. ಕಾರಿನಲ್ಲಿ ಹೋಗುತ್ತಾ ಮಾತನಾಡೋಣ ಎಂದು ಅವರೇ ಹೇಳಿದ್ದರು. ಹೀಗಾಗಿ ಅವರ ಕಾರಿನಲ್ಲಿ ಮಾತನಾಡುತ್ತಾ ಬಂದಿರುವುದಾಗಿ ಸ್ಪಷ್ಟಪಡಿಸಿದರು.
ಇವತ್ತೂ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಬಹಳ ಧನಾತ್ಮಕವಾಗಿ ಸಿಎಂ ಸ್ಪಂದಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಬರುವುದಾಗಿ ಹೇಳಿದ್ದಾರೆ. ಮಾನವೀಯ ನೆಲೆಯಲ್ಲಿ ನಾನು ಸಿಎಂ ಭೇಟಿ ಮಾಡಿದ್ದೇನೆ ಎಂದು ಹೇಳಿದರು. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.

