ಪ್ರತಿಭಟನೆ ವೇಳೆ ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಡಿ.ಕೆ. ಶಿವಕುಮಾರ್ ಮತ್ತು ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಮುಖವಾಡ ಧರಿಸಿ, ‘ದಿವಾಳಿ ಸರ್ಕಾರ’ ಎಂದು ಸಾಂಕೇತಿಕವಾಗಿ ಭಿಕ್ಷೆ ಬೇಡಿ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಆರ್. ಅಶೋಕ್ ಅವರು ಬಸ್ ಪ್ರಯಾಣಿಕರಿಗೆ ಗುಲಾಬಿ ಹೂಗಳನ್ನು ನೀಡಿ ಸರ್ಕಾರದ ನಿರ್ಧಾರದ ವಿರುದ್ಧ ಬೆಂಬಲ ಕೋರಿದರು. ಇನ್ನು ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಪೊಲೀಸರು, ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯುಲು ಯತ್ನಿಸಿದ್ದು, ಈ ವೇಳೆ ವಿಧಾನಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಅವರ ಕೈ ಹಿಡಿದು ಎಳೆದಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ರವಿ ಕುಮಾರ್, ರಸ್ತಯಲ್ಲೇ ಕುಳಿತು ಅಂಗಿ ಬಿಚ್ಚಿ ತೋರಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು, (ನವೆಂಬರ್ 5): ರಾಜ್ಯ ಸರ್ಕಾರದ ಬಸ್ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಇಂದು (ನವೆಂಬರ್ 05) ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಭಿಕ್ಷೆ ಬೇಡುವ ಮೂಲಕ ಬೆಲೆ ಏರಿಕೆ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಇಬ್ಬರು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಮುಖವಾಡ ಧರಿಸಿ, ‘ದಿವಾಳಿ ಸರ್ಕಾರ’ ಎಂದು ಸಾಂಕೇತಿಕವಾಗಿ ಭಿಕ್ಷೆ ಬೇಡಿ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಆರ್. ಅಶೋಕ್ ಅವರು ಬಸ್ ಪ್ರಯಾಣಿಕರಿಗೆ ಗುಲಾಬಿ ಹೂಗಳನ್ನು ನೀಡಿ ಸರ್ಕಾರದ ನಿರ್ಧಾರದ ವಿರುದ್ಧ ಬೆಂಬಲ ಕೋರಿದರು. ಇನ್ನು ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಪೊಲೀಸರು, ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯುಲು ಯತ್ನಿಸಿದ್ದು, ಈ ವೇಳೆ ವಿಧಾನಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಅವರ ಕೈ ಹಿಡಿದು ಎಳೆದಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ರವಿ ಕುಮಾರ್, ರಸ್ತಯಲ್ಲೇ ಕುಳಿತು ಅಂಗಿ ಬಿಚ್ಚಿ ತೋರಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

