ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ. ಸಿಎನ್ ಮಂಜುನಾಥ್
ಬಿಜೆಪಿ ಸರ್ಕಾರವಧಿಯಲ್ಲಿ ಕೋವಿಡ್ ಹಗರಣ ಆರೋಪದ ಪ್ರಕರಣದ ತನಿಖೆಯನ್ನು ಎಸ್ಐಟಿ ವಹಿಸುಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಕಳೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಧರಿಸಿದೆ. ಇದರಿಂದ ಟಾಸ್ಕ್ಫೋರ್ಸ್ನಲ್ಲಿದ್ದ ಬಿಜೆಪಿ ಸಂಸದ ಡಾ ಸಿಎನ್ ಮಂಜುನಾಥ್ ಅವರಿಗೂ ಸಂಕಷ್ಟ ಎದುರಾಗುತ್ತೆ ಎನ್ನುವ ಚರ್ಚೆಗಳು ಶುರುವಾಗಿದೆ. ಇನ್ನು ಇದಕ್ಕೆ ಇದೀಗ ಸ್ವತಃ ಮಂಜುನಾಥ್ ಅವರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು, (ನವೆಂಬರ್ 18):ಕೋವಿಡ್ ಹಗರಣದ ತನಿಖಗೆಯನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅಂದಿನ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಮತ್ತು ಆಗಿನ ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಹಲವರಿಗೆ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಡಾ ಸಿಎನ್ ಮಂಜುನಾಥ್ ಅವರ ಹೆಸರು ಸಹ ಕೇಳಿಬಂದಿದೆ. ಹೀಗಾಗಿ ಇದಕ್ಕೆ ಮಂಜುನಾಥ್ ಸ್ಪಷ್ಟನೆ ನೀಡಿದ್ದು, ನಾನು ಟಾಸ್ಕ್ಫೋರ್ಸ್ ಅಧ್ಯಕ್ಷನಾಗಿರಲಿಲ್ಲ, ಸಲಹಾ ಸಮಿತಿ ಸದಸ್ಯನಾಗಿದ್ದೆ ಅಷ್ಟೇ. ನನ್ನಂತೆಯೇ ಸಾಕಷ್ಟು ವೈದ್ಯರು ಸಲಹಾ ಸಮಿತಿಯಲ್ಲಿದ್ದರು. ನಮ್ಮದೇನಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಸಲಹೆ ನೀಡೋದಷ್ಟೇ. ನಮಗೆ ಆಡಳಿತಾತ್ಮಕವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರ ಅಥವಾ ಆರ್ಥಿಕವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರ ನಮಗೆ ಇರಲಿಲ್ಲ. ಅದು ನಮ್ಮ ಕೆಲಸವೂ ಆಗಿರಲಿಲ್ಲ. ಕೊವಿಡ್ ಸಂದರ್ಭದಲ್ಲಿ ಲೋಪ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ತನಿಖೆ ನಡೆದ ನಂತರ ನೋಡೋಣ ಎಂದು ಸ್ಪಷ್ಟಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

