ಮಗನ ಮದುವೆ ಆಮಂತ್ರಣ ಪತ್ರಿಕೆ ನೀಡಲು ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಸಂಸದ ರಾಘವೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Apr 19, 2025 | 12:48 PM

ಚುನಾಯಿತ ಪ್ರತಿನಿಧಿಗಳು ಯಾವ ಪಕ್ಷದವರೇ ಆಗಿರಲಿ, ಶಿವಕುಮಾರ್ ಅವರನ್ನು ಭೇಟಿಯಾಗುವುದರಲ್ಲಿ ತಪ್ಪಿಲ್ಲ, ಅವರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ವಿಷಯ ಚರ್ಚಿಸಲು ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ, ಅವರು ರಾಜ್ಯದ ಉಪ ಮುಖ್ಯಮಂತ್ರಿ ಅನ್ನೋದನ್ನು ಮರೆಯಬಾರದು ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.

ಬೆಂಗಳೂರು, ಏಪ್ರಿಲ್ 19: ಶಿವಮೊಗ್ಗ ಬಿಜೆಪಿ ಸಂಸದ ಮತ್ತು ಬಿಎಸ್ ಯಡಿಯೂರಪ್ಪನವರ ಮಗ ಬಿವೈ ರಾಘವೇಂದ್ರ ಇಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಹೊರಬಂದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಅವರು ವೈಯಕ್ತಿಕ ಕಾರಣಗಳಿಗಾಗಿ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೆ, ಮಗನ ಮದುವೆ ಆಮಂತ್ರಣ ನೀಡಲು ಬಂದಿದ್ದೆ, ಸಮಯ ಕೊಟ್ಟಿದ್ದರು, ಹಾಗೆಯೇ ಐದು ನಿಮಿಷಗಳ ಕಾಲ ಅವರೊಂದಿಗೆ ಕೂತು ಹಲವು ವಿಷಯಗಳನ್ನು ಚರ್ಚಿಸಿದೆ, ಮದುವೆಗೆ ಬರುತ್ತೇನೆ ಅಂದಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:   ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಶಿವಕುಮಾರ್ ಮನೆಗೆ ಬೋಕೆ ಹಿಡಿದು ಬಂದ ಮುರುಗೇಶ್ ನಿರಾಣಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.