AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ

ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ

ಸುಷ್ಮಾ ಚಕ್ರೆ
|

Updated on:Jun 10, 2026 | 6:27 PM

Share

ಈ ಪ್ರಕರಣದ ಹಿನ್ನೆಲೆಯನ್ನು ವಿವರವಾಗಿ ಪ್ರಸ್ತಾಪಿಸಿದ ಸುಧಾಂಶು ತ್ರಿವೇದಿ, "ಅದು ತೆಲಂಗಾಣದ ಒಬ್ಬ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೇ ತನ್ನದೇ ರಾಜ್ಯದ ಮತ್ತೊಬ್ಬ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ಶೋಷಣೆ ಮತ್ತು ಅನುಚಿತ ವರ್ತನೆಯ ಆರೋಪ ಹೊರಿಸಿ ದಾಖಲಿಸಿದ್ದ ಪ್ರಕರಣವಾಗಿತ್ತು. ಆಕೆ ನೀಡಿದ್ದ ದೂರಿನಲ್ಲಿ ಆ ಸಮಯದಲ್ಲಿ ಉಸ್ತುವಾರಿಯಾಗಿದ್ದ ಮೀನಾಕ್ಷಿ ನಟರಾಜನ್ ಹೆಸರನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಿದ್ದರು. ಕಾಂಗ್ರೆಸ್ ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲಾದ ದೌರ್ಜನ್ಯವನ್ನು ಮುಚ್ಚಿಟ್ಟಿತ್ತು" ಎಂದು ಟೀಕಿಸಿದ್ದಾರೆ.

ನವದೆಹಲಿ, ಜೂನ್ 10: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕೃತಗೊಂಡಿರುವ ವಿಷಯದ ಕುರಿತು ಬಿಜೆಪಿ ಸಂಸದ ಹಾಗೂ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮಧ್ಯಪ್ರದೇಶದಲ್ಲಿ ತನ್ನ ರಾಜ್ಯಸಭಾ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ರಾಜಕಾರಣವು ಆ ಪಕ್ಷದ ನಿಜವಾದ ಉದ್ದೇಶಗಳನ್ನು ಮತ್ತು ಅದರ ಆಂತರಿಕ ಪರಿಸ್ಥಿತಿಯನ್ನು ದೇಶದ ಮುಂದೆ ಸಂಪೂರ್ಣವಾಗಿ ಬಯಲು ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ವಿರುದ್ಧ ತೆಲಂಗಾಣದ ನ್ಯಾಯಾಲಯದಲ್ಲಿ ಪ್ರಕರಣವೊಂದು ಬಾಕಿ ಇತ್ತು ಎಂಬುದು ತೀರಾ ಸ್ಪಷ್ಟವಾದ ವಿಷಯ” ಎಂದು ಸುಧಾಂಶು ತ್ರಿವೇದಿ ಹೇಳಿದ್ದಾರೆ.

ಈ ಪ್ರಕರಣದ ಹಿನ್ನೆಲೆಯನ್ನು ವಿವರವಾಗಿ ಪ್ರಸ್ತಾಪಿಸಿದ ಸುಧಾಂಶು ತ್ರಿವೇದಿ, “ಅದು ತೆಲಂಗಾಣದ ಒಬ್ಬ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೇ ತನ್ನದೇ ರಾಜ್ಯದ ಮತ್ತೊಬ್ಬ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ಶೋಷಣೆ ಮತ್ತು ಅನುಚಿತ ವರ್ತನೆಯ ಆರೋಪ ಹೊರಿಸಿ ದಾಖಲಿಸಿದ್ದ ಪ್ರಕರಣವಾಗಿತ್ತು. ಆಕೆ ನೀಡಿದ್ದ ದೂರಿನಲ್ಲಿ ಆ ಸಮಯದಲ್ಲಿ ಉಸ್ತುವಾರಿಯಾಗಿದ್ದ ಮೀನಾಕ್ಷಿ ನಟರಾಜನ್ ಹೆಸರನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಿದ್ದರು. ಕಾಂಗ್ರೆಸ್ ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲಾದ ದೌರ್ಜನ್ಯವನ್ನು ಮುಚ್ಚಿಟ್ಟಿತ್ತು” ಎಂದು ಟೀಕಿಸಿದ್ದಾರೆ.

“ಕಾನೂನಿನ ದೃಷ್ಟಿಯಿಂದ ನೋಡುವುದಾದರೆ, ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ವಿರುದ್ಧ ಬಾಕಿ ಇರುವ ಯಾವುದೇ ಪ್ರಕರಣದ ಮಾಹಿತಿಯನ್ನು ಅಫಿಡವಿಟ್‌ನಲ್ಲಿ ಕಡ್ಡಾಯವಾಗಿ ಬಹಿರಂಗಪಡಿಸಬೇಕಾಗುತ್ತದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದೆ, ಹಾಗಿದ್ದಾಗ ಈ ಪ್ರಕರಣವನ್ನು ಮುಚ್ಚಲಾಗಿದೆ ಎಂದು ಅವರು ಲಿಖಿತ ಹೇಳಿಕೆಯನ್ನು ಏಕೆ ನೀಡಲಿಲ್ಲ? ತಮಗೆ ಈ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಮೊದಲೇ ಅರಿತಿದ್ದ ಕಾಂಗ್ರೆಸ್, ಉದ್ದೇಶಪೂರ್ವಕವಾಗಿಯೇ ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗುವ ರೀತಿಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿತ್ತೇ?” ಎಂದು ಪ್ರಶ್ನಿಸಿದ್ದಾರೆ.

(Video Source: ANI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 10, 2026 03:35 PM

Follow Us