ಸರಳವಾಗಿ ನೆರವೇರಿತು ಸಂಸದ ತೇಜಸ್ವಿ ಸೂರ್ಯ ಮದ್ವೆ: ವಿಡಿಯೋ ನೋಡಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಇಂದು (ಮಾರ್ಚ್ 06) ಬೆಳಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರು, (ಮಾರ್ಚ್ 06): ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಇಂದು(ಮಾರ್ಚ್ 06) ಬೆಳಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಸಮಾರಂಭವು ಎರಡು ಕಡೆಯ ಕುಟುಂಬಸ್ಥರು, ಆಪ್ತರು, ಕೆಲವೇ ಕೆಲವು ಸ್ನೇಹಿತರ ಸಮ್ಮುಖದಲ್ಲಿ ಸಿಲಿಕಾನ್ ಸಿಟಿಯ ಖಾಸಗಿ ರೆಸಾರ್ಟ್ ಒಂದರಲ್ಲಿ ಸರಳವಾಗಿ ನಡೆಯಿತು. ವಿವಾಹ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ವಿ.ಸೋಮಣ್ಣ, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ನಾಯಕರು, ಸಂಘ ಪರಿವಾರದ ಮುಖಂಡರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು.
Latest Videos

