ಸರಳವಾಗಿ ನೆರವೇರಿತು ಸಂಸದ ತೇಜಸ್ವಿ ಸೂರ್ಯ ಮದ್ವೆ: ವಿಡಿಯೋ ನೋಡಿ

|

Updated on: Mar 06, 2025 | 3:48 PM

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಇಂದು (ಮಾರ್ಚ್​ 06) ಬೆಳಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರು, (ಮಾರ್ಚ್​ 06): ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ಇಂದು(ಮಾರ್ಚ್​ 06) ಬೆಳಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಸಮಾರಂಭವು ಎರಡು ಕಡೆಯ ಕುಟುಂಬಸ್ಥರು, ಆಪ್ತರು, ಕೆಲವೇ ಕೆಲವು ಸ್ನೇಹಿತರ ಸಮ್ಮುಖದಲ್ಲಿ ಸಿಲಿಕಾನ್ ಸಿಟಿಯ ಖಾಸಗಿ ರೆಸಾರ್ಟ್​ ಒಂದರಲ್ಲಿ ಸರಳವಾಗಿ ನಡೆಯಿತು. ವಿವಾಹ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ವಿ.ಸೋಮಣ್ಣ, ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ನಾಯಕರು, ಸಂಘ ಪರಿವಾರದ ಮುಖಂಡರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು.