ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡುವವರ್ಯಾರು? ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದ್ದು, ಇದಕ್ಕೆ ಪೂರಕವೆಂಬಂತೆ ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ಹೀಗಾಗಿ ತಮಿಳುನಾಡಿನಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಇದರ ಮಧ್ಯೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಸಂಚಲನ ಮೂಡಿಸಿದೆ.
ನವದೆಹಲಿ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದ್ದು, ಇದಕ್ಕೆ ಪೂರಕವೆಂಬಂತೆ ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ಹೀಗಾಗಿ ತಮಿಳುನಾಡಿನಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಇದರ ಮಧ್ಯೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಸಂಚಲನ ಮೂಡಿಸಿದೆ.
ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಕಸರತ್ತು ನಡೆದಿರುವ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿ.ಎಲ್.ಸಂತೋಷ್ ಪೋಸ್ಟ್ ಮಾಡಿದ್ದು, ಯಾರು ಸರ್ಕಾರ ರಚಿಸುತ್ತಾರೆ ಎಂಬುದನ್ನು ಕಾಲವೇ ಹೇಳುತ್ತದೆ. ಆದರೆ ಒಂದು ವಿಷಯ ಅಂತೂ ಖಚಿತ. ಕಾಂಗ್ರೆಸ್ ಕೊನೆಯಲ್ಲಿ ಮುಖಕ್ಕೆ ಮೊಟ್ಟೆಯಲ್ಲಿ ಹೊಡೆಸಿಕೊಂಡಂತಾಗುತ್ತೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಟಿವಿಕೆಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ: ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು
Published on: May 08, 2026 02:45 PM
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!

