Chamarajanagara: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

Arun Kumar Belly

|

Updated on: Mar 01, 2023 | 5:09 PM

ಅದಕ್ಕೂ ಮೊದಲು ನಡ್ಡಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಮಲೆಮಹದೇಶ್ವರಿಗೆ ಪೂಜೆ ಸಲ್ಲಿಸಿದರು.

ಚಾಮರಾಜನಗರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಚಾಮರಾಜನಗರದಲ್ಲಿಂದು ಪಕ್ಷದ ವಿಜಯ ಸಂಕಲ್ಪ ಯಾತ್ರೆಗೆ (Vijay Sankalp Yatre) ಡ್ರಮ್ ಬಾರಿಸಿ, ಬಿಜೆಪಿ ಧ್ವಜ ಬೀಸುವ ಮೂಲಕ ಚಾಲನೆ ನೀಡಿದರು. ಅದಕ್ಕೂ ಮೊದಲು ನಡ್ಡಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಮಲೆಮಹದೇಶ್ವನಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನ ಮುಂದಿನಿಂದ ಬಸ್ ಚಲಿಸಿದಾಗ ಅದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದೆ ಶೋಭಾ ಕರಂದ್ಲಾಜೆ, ಕೆಎಸ್ ಈಶ್ವರಪ್ಪ, ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಮೊದಲಾದವರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow us on

Click on your DTH Provider to Add TV9 Kannada