ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ: ಪ್ರಮುಖ ನಾಯಕರು ಭಾಗಿ

Edited By:

Updated on: Aug 10, 2026 | 12:27 PM

Har Ghar Tiranga Rally: ಬೆಂಗಳೂರಿನಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬಿಜೆಪಿ ತ್ರಿವರ್ಣ ಧ್ವಜ ಯಾತ್ರೆ ಆಯೋಜಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಕೆ.ಸಿ. ಜನರಲ್ ಆಸ್ಪತ್ರೆಯ ಸಮೀಪದಿಂದ ಆರಂಭವಾದ ಈ ಯಾತ್ರೆಯಲ್ಲಿ ದೇಶಭಕ್ತಿ ಘೋಷಣೆಗಳು ಮೊಳಗಿದವು.

ಬೆಂಗಳೂರು, ಆಗಸ್ಟ್​​ 10: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ತ್ರಿವರ್ಣ ಧ್ವಜ ಯಾತ್ರೆ ನಡೆಯಿತು. ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗದ ಸರ್ಕಾರಿ ಶಾಲೆಯ ಬಳಿಯಿಂದ ಆರಂಭವಾದ ಈ ಯಾತ್ರೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್ ಸೇರಿದಂತೆ ಹಲವು ಪ್ರಮುಖ ನಾಯಕರು ವಹಿಸಿದ್ದರು. ಯಾತ್ರೆಯ ಉದ್ದಕ್ಕೂ “ಭಾರತ್ ಮಾತಾ ಕಿ ಜೈ”, “ವಂದೇ ಮಾತರಂ”ನಂತಹ ಘೋಷಣೆಗಳು ಮೊಳಗಿದವು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More