ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು?
ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಅಂತೇಳುವ ಮೂಲಕ ವಿಧಾನಸಭೆ ಮೈತ್ರಿಯನ್ನ ತಳ್ಳಿಹಾಕಿದ್ದಾರೆ. ಇದು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
ಬೆಂಗಳೂರು, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ, (JDS And BJP alliance)ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಸ್ಪಷ್ಟಪಡಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಎಂಪಿ, ಎಂಎಲ್ಎಗಳು ಅನ್ಯೂನ್ಯವಾಗಿರಲಿ. ಸ್ಥಳೀಯವಾಗಿ ಚುನಾವಣೆಗಳು ಕೆಳ ಹಂತದ ಕಾರ್ಯಕರ್ತರು ಹೊಡೆದುಕೊಳ್ಳಲಿ ಎಂದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.
ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
