JP Nadda in Karnataka:  ಕಲಬುರಗಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪರೊಂದಿಗೆ ವಿಜಯಪುರಕ್ಕೆ ತೆರಳಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2023 | 12:43 PM

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಸ್ಥಳೀಯ ಮುಖಂಡರು ನಡ್ಡಾ ಅವರನ್ನು ಸ್ವಾಗತಿಸಿದರು

ಕಲಬುರಗಿ ಜಿಲ್ಲೆ ಮತ್ತು ನಗರದ ಬಿಜೆಪಿ ಕಾರ್ಯಕರ್ತರ ಸಂತೋಷ, ಸಡಗರಗಳಿಗೆ ಎಣೆಯಿದ್ದಂತಿಲ್ಲ ಮಾರಾಯ್ರೇ. ಕೇವಲ ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕಲಬುರಗಿಗೆ ಆಗಮಿಸಿ ಸೇಡಂ ತಾಲ್ಲೂಕಿನ ಮಳಖೇಡನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಇಂದು ಅಂದರೆ, ಶನಿವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಹೊತ್ತ ವಿಶೇಷ ವಿಮಾನವೊಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಮತ್ತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ಸ್ಥಳೀಯ ಮುಖಂಡರು ನಡ್ಡಾ ಅವರನ್ನು ಸ್ವಾಗತಿಸಿದರು. ನಂತರ ನಡ್ಡಾ, ಬಿಎಸ್ ವೈ ಮತ್ತು ಅಶ್ವಥ್ ನಾರಾಯಣ ಜೊತೆ ಹೆಲಿಕಾಪ್ಟರೊಂದರಲ್ಲಿ ವಿಜಯಪುರಕ್ಕೆ ಹೊರಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.